
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕೊಟಗಾ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಮನೆ
ಚಿಂಚೋಳಿ (ಕಲಬುರಗಿ ಜಿಲ್ಲೆ): ಕಟ್ಟಡ ಛತ್ತು ಹಾಕಲು ತಂದಿದ್ದ ಸೆಂಟ್ರಿಂಗ್ ಸಾಮಾನು ಇಳಿಸುವಾಗ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ತಾಲ್ಲೂಕಿನ ಕೊಟಗಾ ಗ್ರಾಮದಲ್ಲಿ ಸಂಭವಿಸಿದೆ.
ರಟಕಲ್ ಗ್ರಾಮದ ಸಂಗಮೇಶ ಬಿರಾದಾರ (38) ಮೃತರು. ರಟಕಲ್ ಗ್ರಾಮದಿಂದ ಸೆಂಟ್ರಿಂಗ್ ಸಾಮಾನುಗಳು ಕೊಟಗಾ ಗ್ರಾಮಕ್ಕೆ ಒಯ್ದಿದ್ದು, ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಸಮೀಪದಲ್ಲಿ ಮನೆ ನಿರ್ಮಿಸುತ್ತಿದ್ದ ವ್ಯಕ್ತಿಯೊಬ್ಬರ ಕಟ್ಟಡಕ್ಕೆ ಛತ್ತು ಹಾಕಲು ತೆರಳಿದ್ದರು. ಛತ್ತಿನ ಸಾಮಾನು ಇಳಿಸುವಾಗ ಮೇಲಿನಿಂದ ಹಾದು ಹೋಗಿದ್ದ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಪ್ರವಹಿಸಿ ಮೃತ ಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಾಳಗಿ ತಾಲ್ಲೂಕಿನ ರಟಕಲ್ ಠಾಣೆಯ ಸಬ್ ಇನಸ್ಪೆಕ್ಟರ್ ಶೀಲಾದೇವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.