ಕಲಬುರಗಿ: ನಗರದ ಎನ್.ವಿ ಪದವಿ ಮಹಾವಿದ್ಯಾಲಯದಲ್ಲಿ ಫೈನ್ ಆರ್ಟ್ ವಿಭಾಗವು ಮಹಾವಿದ್ಯಾಲಯದ ಐಕ್ಯೂಎಸಿ ಸಹಯೋಗದೊಂದಿಗೆ ಆ.18ರಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ ನಿರ್ಮಾಣದ ಎರಡು ದಿನಗಳ ಕಾರ್ಯಾಗಾರ ಮತ್ತು ಮಾರಾಟ ಹಮ್ಮಿಕೊಂಡಿದೆ.
ಈ ಕಾರ್ಯಾಗಾರವನ್ನು ಆ.18ರಂದು ಬೆಳಿಗ್ಗೆ 11 ಗಂಟೆಗೆ ನೂತನ ವಿದ್ಯಾಲಯ ಸಂಸ್ಥೆಯ ಉಪಾಧ್ಯಕ್ಷೆ ಸುಧಾ ಕರಲಿಗಿಕರ್ ಉದ್ಘಾಟಿಸುವರು. ಜೋಗುರ ಸರ್ಕಾರಿ ಪ್ರೌಢಶಾಲೆ ಚಿತ್ರಕಲಾ ಶಿಕ್ಷಕ ಜಗದೀಶ್ ಪಾಟೀಲ ಕಾರ್ಯಾಗಾರವನ್ನು ನಡೆಸಿಕೊಡುವರು. ಪ್ರಾಚಾರ್ಯ ದಯಾನಂದ ಶಾಸ್ತ್ರಿ ಅಧ್ಯಕ್ಷತೆ ವಹಿಸುವರು. ಐಕ್ಯೂಎಸಿ ಸಂಯೋಜಕ ಪ್ರೊ.ಗೋವಿಂದ ಪೂಜಾರ ಉಪಸ್ಥಿತರಿರುವರು ಎಂದು ಫೈನ್ ಆರ್ಟ್ ವಿಭಾಗದ ಮುಖ್ಯಸ್ಥ ಪ್ರೊ. ಜಿತೇಂದ್ರ ಕೊಥಳಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.