ಬೀದರ್: ‘ಧರ್ಮಸ್ಥಳದ ಮೀಸಲು ಅರಣ್ಯ ಪ್ರದೇಶದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರೆ ಕ್ರಮ ಜರುಗಿಸಲಾಗುವುದು’ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ತನಿಖೆ ನಡೆಯುತ್ತಿದೆ. ಎಲ್ಲಿ ಅಕ್ರಮವಾಗಿದೆ? ಯಾವ ಅರಣ್ಯ ಪ್ರದೇಶ, ಸರ್ವೆ ನಂಬರ್ ಯಾವುದು? ಯಾರ ವ್ಯಾಪ್ತಿಗೆ ಬರಲಿದೆ ಎಂದು ಗಮನಿಸಿ ತೀರ್ಮಾನಿಸುತ್ತೇವೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.