ADVERTISEMENT

ಮುಖ್ಯಮಂತ್ರಿ ಲಿಖಿತ ಭಾಷಣದ ಮುಖ್ಯಾಂಶಗಳು

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 5:47 IST
Last Updated 17 ಸೆಪ್ಟೆಂಬರ್ 2020, 5:47 IST
ಕಲಬುರ್ಗಿಯಲ್ಲಿ ಗುರುವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಕಲಬುರ್ಗಿಯಲ್ಲಿ ಗುರುವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಕಲಬುರ್ಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಗರದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಓದಲೆಂದು ಸಿದ್ಧಪಡಿಸಿದ್ದ ಲಿಖಿತ ಭಾಷಣದ ಮುಖ್ಯಾಂಶಗಳಿವು...

* ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೆ ಹೈದರಬಾದ್-ಕರ್ನಾಟಕ ಪ್ರದೇಶವನ್ನು 'ಕಲ್ಯಾಣ ಕರ್ನಾಟಕ'ಎಂದು ಮರು ನಾಮಕರಣ ಮಾಡಿ ಇಲ್ಲಿನ ಬಹುಜನರ ಒತ್ತಾಸೆಯನ್ನು ಈಡೇರಿಸಲಾಗಿದೆ.

* ಪ್ರಾದೇಶಿಕ ಅಸಮತೋಲನವನ್ನು ನಿವಾರಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ಸ್ಥಾಪನೆಗೊಂಡಿದೆ.

ADVERTISEMENT

* ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘವು ನಿಗದಿತ ಗುರಿ ಮುಟ್ಟುವಲ್ಲಿ ಸರ್ವರ ಸಹಕಾರದೊಂದಿಗೆ ಸಂಪೂರ್ಣ ಯಶಸ್ವಿಯಾಗುತ್ತದೆ ಎಂದು ನಾನು ನಂಬಿದ್ದೇನೆ.

* ಕಲ್ಯಾಣ ಕರ್ನಾಟಕ ಪ್ರಾಂತ್ಯದ ಅಭಿವೃದ್ಧಿಗೆ ಹೊಸ ಆಯಾಮ ನೀಡುವುದು ನಮ್ಮ ಸರ್ಕಾರದ ಪ್ರಮುಖ ಗುರಿಗಳಲ್ಲಿ ಒಂದಾಗಿದೆ. ಈ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಮಂಡಳಿ ಮತ್ತು ಸಂಘವು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಸಂತೋಷದ ವಿಚಾರ.

* ಕೃಷಿ, ಆರೋಗ್ಯ, ಶಿಕ್ಷಣ, ಸ್ವಯಂ ಉದ್ಯೋಗ, ಗ್ರಾಮ ಸಬಲೀಕರಣ, ಯುವ ಜನ ಹಾಗೂ ಮಹಿಳಾ ಸಬಲೀಕರಣ ಮತ್ತು ನೈತಿಕ ತತ್ವಗಳನ್ನು ಸಾಧಿಸಿ, ಕಲ್ಯಾಣ ಕರ್ನಾಟಕದ ಜನರ ಬದುಕಿನಲ್ಲಿ ಹೊಸ ಅಧ್ಯಾಯೊಂದನ್ನು ತೆರೆಯಕು ಸ್ಥಾಪಿಸಿರುವ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕಂತಿಕ ಸಂಘಕ್ಕೆ ₹30ಕೋಟಿ ಮೊತ್ತ ಬಿಡುಗಡೆಗೆ ಅನುಮೋದನೆ ನೀಡಿ ₹100 ಕೋ‌ಟಿ ಅನುದಾನ ಬಿಡುಗಡೆ ಮಾಡಿದೆ.

* ಮೂರು ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಕಲಬುರಗಿ, ಬೀದರ್ಜಿಲ್ಲೆಗೆ ಉಪಯೋಗವಾಗುವ ಕೃಷಿ ಮತ್ತು ಕುಡಿಯುವ ನೀರಿನ ಯೋಜನೆ ಮತ್ತು ಕಾಗಿಣಾ ನದಿಗೆ ಹೊಂದಿಕೊಂಡು 10 ಏತ ನೀರಾವರಿ ಯೋಜನೆಯ ಕಾಮಗಾರಿಗೆ ಅನುಮೋದನೆ ನೀಡಲಾಗಿದ್ದು, ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು. ಇದರಿಂದ ಬೀದರ್ ಮತ್ತು ಕಲಬುರಗಿ ಜಿಲ್ಲೆಯ ರೈತರ ಲಕ್ಷಾಂತರ ಎಕರೆ ಭೂಮಿಗೆ ನೀರಿನ ಪೂರೈಕೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ.

* ರಾಯಚೂರು ಜಿಲ್ಲೆಯ ಗೋಲಪಲ್ಲಿಯಲ್ಲಿ 1,200 ಮೆಗಾ ವ್ಯಾಟ್ ಸಾಮರ್ಥ್ಯದ₹10,000 ಕೋಟಿ ವೆಚ್ಚದ ಜಲ ವಿದ್ಯುತ್ ಯೋಜನೆಯು ಪರಿಶೀಲನಾ ಹಂತದಲ್ಲಿದ್ದು, ನೆರೆ ರಾಜ್ಯದ ಜೊತೆ ಮಾತುಕತೆಯ ನಂತರ ಸೂಕ್ತ ಕ್ರಮವಹಿಸಲಾಗುವುದು.

* ಮುಂದಿನ ನಾಲ್ಕು ತಿಂಗಳ ಅವಧಿಯಲ್ಲಿ ಬಸವಕಲ್ಯಾಣದಲ್ಲಿ ಅನುಭವ ಕಲ್ಯಾಣ ಮಂಟಪ ನಿರ್ಮಾಣ ಕಾರ್ಯಾರಂಭ ಮಾಡಲಾಗುವುದು.

* ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ವ್ಯಾಪ್ತಿಗೊಳಪಡುವ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳು ಅತಿ ಹಿಂದುಳಿದ ಪ್ರದೇಶಗಳಾಗಿದ್ದು, ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಸಾಧ್ಯವಾದ ಎಲ್ಲ ಕ್ರಮಗಳನ್ನು ಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.