ADVERTISEMENT

ಚಿಂಚೋಳಿ| ‘ನಾರಾಯಣ ಸ್ವಾಮಿಯನ್ನು ಗಡಿಪಾರು ಮಾಡಿ’: ಪುರಸಭೆ ಅಧ್ಯಕ್ಷ ಆನಂದ ಟೈಗರ್

​ಪ್ರಜಾವಾಣಿ ವಾರ್ತೆ
Published 22 ಮೇ 2025, 14:31 IST
Last Updated 22 ಮೇ 2025, 14:31 IST
ಆನಂದ ಟೈಗರ್
ಆನಂದ ಟೈಗರ್   

ಚಿಂಚೋಳಿ: ‘ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ನೀಡಿರುವ ಹೇಳಿಕೆ ಖಂಡನೀಯ’ ಎಂದು ಪುರಸಭೆ ಅಧ್ಯಕ್ಷ ಆನಂದ ಟೈಗರ್ ಹೇಳಿದ್ದಾರೆ.

‘ಪ್ರಜಾವಾಣಿ’ ಜತೆಗೆ ಮಾತನಾಡಿದ ಅವರು, ‘ಪ್ರಿಯಾಂಕ್ ಖರ್ಗೆ ಅವರ ಏಳ್ಗೆ ಸಹಿಸದ ಬಿಜೆಪಿಯ ಮನುವಾದಿಗಳು ಅಸಂಸದೀಯ ಪದಗಳನ್ನು ಬಳಸಿ ಟೀಕಿಸುವ ಮೂಲಕ ತಮ್ಮ ನೈತಿಕ ದಿವಾಳಿತನ ಪ್ರದರ್ಶಿಸಿದ್ದಾರೆ. ಪ್ರಿಯಾಂಕ್ ಅವರನ್ನು ಸೈದ್ಧಾಂತಿಕವಾಗಿ ಎದುರಿಸಲಾಗದೆ ಛಲವಾದಿ ನಾರಾಯಣ ಸ್ವಾಮಿ ತಮ್ಮ ನಾಲಗೆ ಹರಿಬಿಟ್ಟಿದ್ದು ತಕ್ಷಣ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ, ಪ್ರಿಯಾಂಕ್ ಅವರಲ್ಲಿ ಕ್ಷಮೆ ಕೇಳಬೇಕು. ಇಲ್ಲವಾದರೆ ರಾಜ್ಯ ಸರ್ಕಾರ ಅವರನ್ನು ಸಾಮಾಜಿಕ ಶಾಂತಿ ಕದಡುತ್ತಿರುವ ಆರೋಪದಡಿ ಗಡಿಪಾರು ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT