
ಪ್ರಜಾವಾಣಿ ವಾರ್ತೆ
ಹುಲಸೂರ: ತಾಲ್ಲೂಕಿನ ಸಮೀಪದ ಸಾಯಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಸರ ಜವಳಗಾ ಗ್ರಾಮದಲ್ಲಿ ಸಾಲಬಾಧೆಯಿಂದ ಹೊಲದಲ್ಲಿ ನೇಣು ಬಿಗಿದುಕೊಂಡು ರೈತರೊಬ್ಬರು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಂಟೆಪ್ಪಾ ಪೀರಣ್ಣ ವಾಘೆ (60) ಮೃತ ರೈತ. ಪಿಕೆಪಿಎಸ್ ಸಹಕಾರ ಸಂಘದಲ್ಲಿ ₹2.50 ಲಕ್ಷ ಸಾಲ ಪಡೆದಿದ್ದರು. ಜತೆಗೆ ಖಾಸಗಿಯವರಿಂದಲೂ ಸಾಲ ಪಡೆದಿದ್ದಾರೆ. ಬೆಳೆದ ಫಸಲು ಕೈಗೆ ಸಿಗದೆ ನಷ್ಟವುಂಟಾಗಿದ್ದರಿಂದ ಹಣಕಾಸಿನ ತೊಂದರೆಯುಂಟಾಗಿ ನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತ್ನಿ ಮಂಗಲಬಾಯಿ ದೂರಿನಲ್ಲಿ ತಿಳಿಸಿದ್ದಾರೆ. ಮೃತ ರೈತಗೆ ಮೂವರು ಗಂಡು ಮಕ್ಕಳಿದ್ದಾರೆ. ಮೇಹಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್‌ಐ ಶಿವಕುಮಾರ ಬಳತೆ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.