ಯಡ್ರಾಮಿ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಾವು ಕಚ್ಚಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಇಜೇರಿ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಬಾಬು ರಾಮಚಂದ್ರ ಕಟ್ಟಿಮನಿ (34) ಮೃತಪಟ್ಟವರು. ಬಾಬು ರಾಮಚಂದ್ರ ಕಟ್ಟಿಮನಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ. ನಾಲ್ವರು ಹೆಣ್ಣುಮಕ್ಕಳು ಮತ್ತು ಪುತ್ರ, ಪತ್ನಿ ಇದ್ದಾರೆ.
ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.