ಕಲಬುರ್ಗಿ: ಕೋವಿಡ್‌ನಿಂದ ಬಳಲುತ್ತಿದ್ದ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ, ಹೋರಾಟಗಾರ ಮಾರುತಿ ಮಾನ್ಪಡೆ (65) ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಕೋವಿಡ್ ದೃಢಪಟ್ಟಿದ್ದರಿಂದ ಒಂದು ದಿನ ಕಲಬುರ್ಗಿಯ ಜಿಮ್ಸ್‌ನಲ್ಲಿ ದಾಖಲಾಗಿದ್ದ ಅವರು, ಅ.5ರಂದು ಸೊಲ್ಲಾಪುರದ ಅಶ್ವಿನಿ ಆಸ್ಪತ್ರೆಗೆ ದಾಖಲಾಗಿದ್ದರು. ಮೂರು ದಿನಗಳಿಂದ ವೆಂಟಿಲೇಟರ್‌ನಲ್ಲಿ ಇದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.