ಆಳಂದ: ತಾಲ್ಲೂಕಿನ ಮದುಗುಣಕಿ ಗ್ರಾಮದಲ್ಲಿ ಸೋಮವಾರ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರೇವಪ್ಪ ಶಿವರಾಚಪ್ಪ ಸಣಮನಿ (50) ಮೃತಪಟ್ಟವರು.ಅವರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ.
ಮದುವೆ ಮತ್ತಿತರ ಕೌಟುಂಬಿಕ ಕಾರಣಗಳಿಗಾಗಿ ತಮ್ಮ 6 ಎಕರೆ ಜಮೀನಿನಲ್ಲಿ 5 ಎಕರೆ ಜಮೀನು ಮಾರಾಟ ಮಾಡಿದ್ದರು. ಗ್ರಾಮದ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಯಲ್ಲಿ ₹2 ಲಕ್ಷ ಹಾಗೂ ಖಾಸಗಿ ಲೇವಾದೇವಿಗಾರರ ಬಳಿ ₹5 ಲಕ್ಷ ಸಾಲ ಮಾಡಿದ್ದರು. ಸಾಲಬಾಧೆ ಹಾಗೂ ಆರ್ಥಿಕ ಸಮಸ್ಯೆಯಿಂದ ನೊಂದು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಾದನ ಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.