ADVERTISEMENT

ಕೆಲ್ಲೂರ: ವಿಷ ಸೇವಿಸಿ ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2026, 5:42 IST
Last Updated 1 ಜನವರಿ 2026, 5:42 IST
ನಿಂಗಣ್ಣ ದೇಸಾಯಿ
ನಿಂಗಣ್ಣ ದೇಸಾಯಿ   

ಜೇವರ್ಗಿ: ಸಾಲಬಾಧೆಯಿಂದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ತಾಲ್ಲೂಕಿನ ಕೆಲ್ಲೂರ ಗ್ರಾಮದಲ್ಲಿ ಜರುಗಿದೆ.

ನಿಂಗಣ್ಣ ಮಲ್ಲೇಶಪ್ಪ ದೇಸಾಯಿ (37) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ಇವರು ತಮ್ಮ 2.21 ಎಕರೆ ಸ್ವಂತ ಜಮೀನು ಹಾಗೂ ಹತ್ತಾರು ಎಕರೆ ಜಮೀನು ಲೀಜ್ ಪಡೆದುಕೊಂಡು ಕೃಷಿ ಮಾಡುತ್ತಿದ್ದರು. ಕೈಗೆ ಬಂದ ಹತ್ತಿ ಹಾಗೂ ಇತರೆ ಬೆಳೆ ಅತಿವೃಷ್ಟಿಯಿಂದ ನಾಶವಾಗಿ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದರು.

ADVERTISEMENT

ಡಿಸಿಸಿ ಬ್ಯಾಂಕಿನಲ್ಲಿ ₹22 ಸಾವಿರ, ಖಾಸಗಿಯಾಗಿ ₹10.5 ಲಕ್ಷ ಸಾಲ ಮಾಡಿದ್ದರು. ಸಾಲಬಾಧೆಗೆ ಮನನೊಂದು ತಮ್ಮ ಹೊಲದಲ್ಲಿ ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪತ್ನಿ ವಿಜಯಲಕ್ಷ್ಮೀ ದೂರಿನಲ್ಲಿ ತಿಳಿಸಿದ್ದಾರೆ. 

ಘಟನಾ ಸ್ಥಳಕ್ಕೆ ಪಿಎಸ್ಐ ಗಜಾನಂದ ಬಿರಾದಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.