ADVERTISEMENT

ಜೇವರ್ಗಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2022, 3:58 IST
Last Updated 27 ಏಪ್ರಿಲ್ 2022, 3:58 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೇವರ್ಗಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೇವರ್ಗಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು   

ಜೇವರ್ಗಿ: ರೈತರ ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು, ಸ್ವಾಮಿನಾಥನ ವರದಿ ಜಾರಿಗೆ ಆಗ್ರಹ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಲಾಯಿತು.

60 ವರ್ಷ ದಾಟಿದ ರೈತರಿಗೆ ಹಾಗೂ ಕೂಲಿಕಾರ್ಮಿಕರಿಗೆ ಮಾಸಿಕ ₹ 7500, ನರೇಗಾ ಕೆಲಸದ ಸಮಯವನ್ನು ಬೆಳಿಗ್ಗೆ 7ರಿಂದ 11 ಗಂಟೆಯವರೆಗೆ ನಿಗದಿ ಮಾಡಬೇಕು, ಕೂಲಿಯನ್ನು ₹600 ಹೆಚ್ಚಳ ಮಾಡಬೇಕು, ಬಾಕಿ ಇರುವ ವೇತನ ಹಾಗೂ ಕೊರೊನಾ ಪರಿಹಾರ ತಕ್ಷಣ ನೀಡಬೇಕು ಎಂದು ಒತ್ತಾಯಿಸಿದರು.

ಬೆಳೆ ಹಾನಿಯಾದ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು, ಜೇವರ್ಗಿಯಿಂದ ಗೌನಳ್ಳಿ ವರೆಗಿನ ರಸ್ತೆ ಡಾಂಬರೀಕರಣ ಮಾಡಬೇಕು ಸೇರಿದಂತೆ ಇತರೆ ಬೇಡಿಕೆಗಳಿಗೆ ಒತ್ತಾಯಿಸಲಾಯಿತು.

ADVERTISEMENT

ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸುಭಾಷ ಹೊಸಮನಿ, ಪರಶುರಾಮ ಬಡಿಗೇರ, ವೆಂಕೋಬರಾವ ವಾಗಣಗೇರಾ, ಮಲಕಪ್ಪ ಮ್ಯಾಗೇರಿ ಹರನೂರ, ಶಂಕರಲಿಂಗ ರೇವನೂರ, ಶ್ರೀನಾಥ ಕೋಳಕೂರ, ಜೈಭೀಮ ಮುದಬಾಳ, ಮಲ್ಲಿಕಾರ್ಜುನ ವರ್ಚನಳ್ಳಿ, ಬಸವರಾಜ ಶಖಾಪೂರ, ನಿಂಗಣ್ಣ ಯಾತನೂರ, ಮಹೇಶ ಬಳಬಟ್ಟಿ, ರಾಜು ಸಾಥಖೇಡ ರೇವನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.