ADVERTISEMENT

ಸೇಡಂ: ಪ್ರತಿಭೆ ಪ್ರೋತ್ಸಾಹಿಸುವ ಕೆಲಸ ಮಾದರಿ, ಶರಣಕುಮಾರ ಮೋದಿ ಅಬಿಮತ

ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಶರಣಕುಮಾರ ಮೋದಿ ಅಭಿಮತ

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 6:43 IST
Last Updated 31 ಜುಲೈ 2021, 6:43 IST
ಸೇಡಂನಲ್ಲಿ ಗುರುವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಹಾಲಪ್ಪಯ್ಯ ವಿರಕ್ತ ಮಠದ ಪಂಚಾಕ್ಷರಿ ಸ್ವಾಮೀಜಿ ಮಾತನಾಡಿದರು
ಸೇಡಂನಲ್ಲಿ ಗುರುವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಹಾಲಪ್ಪಯ್ಯ ವಿರಕ್ತ ಮಠದ ಪಂಚಾಕ್ಷರಿ ಸ್ವಾಮೀಜಿ ಮಾತನಾಡಿದರು   

ಸೇಡಂ: ‘ಸಮಾಜದಲ್ಲಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ’ ಎಂದು ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಶರಣಕುಮಾರ ಮೋದಿ ಅಭಿಪ್ರಾಯಪಟ್ಟರು.

ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಸಹಯೋಗದಲ್ಲಿ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಡೆದ ರಾಜ್ಯಮಟ್ಟದ ಎಸ್.ಬಿ ಜಂಗಮಶೆಟ್ಟಿ ಪ್ರಶಸ್ತಿ ಪಡೆದ ಶಿವಯ್ಯಸ್ವಾಮಿ ಬಿಬ್ಬಳ್ಳಿ ಮತ್ತು ಜಿಲ್ಲಾ ಮಟ್ಟದ ಉತ್ತಮ ಗ್ರಾಮೀಣ ವರದಿಗಾರ ಪ್ರಶಸ್ತಿ ಪಡೆದ ಅವಿನಾಶ ಬೋರಂಚಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಕಲಬುರ್ಗಿಯಲ್ಲಿ ವಸತಿ ನಿಲಯ ಕಟ್ಟಡ ಕಾಮಗಾರಿ ನಡೆಯುತ್ತಿದೆ’ ಎಂದರು. ಹಾಲಪ್ಪಯ್ಯ ವಿರಕ್ತ ಮಠದ ಪಂಚಾಕ್ಷರಿ ಸ್ವಾಮೀಜಿ ಮಾತನಾಡಿದರು.

ADVERTISEMENT

ಶಿವಶಂಕರೇಶ್ವರ ಮಠದ ಶಿವಶಂಕರ ಶಿವಾಚಾರ್ಯ, ಕೊತ್ತಲ ಬಸವೇಶ್ವರ ದೇವಾಲಯದ ಸದಾಶಿವ ಸ್ವಾಮೀಜಿ, ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ, ವೀರಶೈವ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೆಟ್ಟಿ ಬಂಗಾರ, ವೀರೇಂದ್ರ, ಸರ್ಕಾರಿ ನೌಕರ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಶಿವಶಂಕ್ರಯ್ಯಸ್ವಾಮಿ ಇಮಡಾಪೂರ ಹಾಗೂ ಪ್ರದೀಪ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.