ADVERTISEMENT

ದಾಕ್ಷಾಯಣಿ ಅವ್ವಗೆ ಗೌರವ ಡಾಕ್ಟರೇಟ್‌

ಶ್ರೀಶೈಲ ಸಾರಂಗ ಮಠದ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಸನ್ಮಾನ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 4:27 IST
Last Updated 30 ಸೆಪ್ಟೆಂಬರ್ 2020, 4:27 IST
ದಾವಣಗೆರೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆಯಾಗಿದಕ್ಕಾಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್ ದಾಕ್ಷಾಯಿಣಿ ಎಸ್. ಅಪ್ಪ ಅವರಿಗೆ ಶ್ರೀಶೈಲಂ ಸಾರಂಗ ಮಠದ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಸನ್ಮಾನಿಸಿ ಗೌರವಿಸಿದರು. ಸಂಸ್ಥಾನದ ಪೀಠಾಧಿಪತಿಗಳಾದ ಡಾ.ಶರಣಬಸವಪ್ಪ ಅಪ್ಪ, ಬಸವರಾಜ ದೇಶಮುಖ, ಡಾ.ಅನಿಲಕುಮಾರ ಬಿಡವೆ, ಡಾ.ಲಿಂಗರಾಜ ಶಾಸ್ತ್ರಿ, ಡೀನ್ ಡಾ.ಲಕ್ಷ್ಮಿ ಪಾಟೀಲ, ಡಾ.ಬಸವರಾಜ ಮಠಪತಿ ಇದ್ದರು

ಕಲಬುರ್ಗಿ: ಇಲ್ಲಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್ ದಾಕ್ಷಾಯಿಣಿ ಎಸ್‌. ಅಪ್ಪ ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಿಸಿದ ಪ್ರಯುಕ್ತ ಶ್ರೀಶೈಲ ಸಾರಂಗ ಮಠದ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಸತ್ಕರಿಸಿ ಅಭಿನಂದಿಸಿದರು.

ಸಂಘದ ಶರಣಬಸವ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರೂ ಆಗಿರುವ ದಾಕ್ಷಾಯಿಣಿ ಎಸ್. ಅಪ್ಪ ಅವರು ಶೈಕ್ಷಣಿಕ ಕ್ಷೇತ್ರಕ್ಕೆ ಸಲ್ಲಿಸಿರುವ ಕೊಡುಗೆ, ಸಾಧನೆ ಮತ್ತು ಸೇವೆಗಳನ್ನು ಪರಿಗಣಿಸಿ ಬುಧವಾರ ನಡೆಯುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ ಎಂದು ವಿ.ವಿ. ಕುಲಪತಿ ಡಾ.ಶರಣಪ್ಪ ವಿ. ಹಲ್ಸೆ ತಿಳಿಸಿದ್ದಾರೆ.

ದಾಕ್ಷಾಯಣಿ ಅವ್ವ ಅವರಿಗೆ ಗೌರವ ಡಾಕ್ಟರೇಟ್ ಸಂದಿರುವುದರಿಂದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಹಾಗೂ ಶರಣ ಬಸವ ವಿ.ವಿ.ಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನೂ ಮಹೋನ್ನತ ಸಾಧನೆಯತ್ತ ದಾಪುಗಾಲಿಡಲು ಪ್ರೇರಣೆ ಸಿಕ್ಕಂತಾಗಿದೆ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ADVERTISEMENT

ಶರಣಬಸವ ವಿ.ವಿ. ಕುಲಸಚಿವ ಡಾ.ಅನಿಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ.ಲಿಂಗರಾಜ ಶಾಸ್ತ್ರಿ, ಡೀನ್ ಡಾ.ಲಕ್ಷ್ಮಿ ಪಾಟೀಲ, ಡಾ.ಬಸವರಾಜ ಮಠಪತಿ ಹಾಗೂ ವಿಶ್ವವಿದ್ಯಾಲಯದ ವಿವಿಧ ವಿಭಾಗದ ಮುಖ್ಯಸ್ಥರು ಸನ್ಮಾನಿಸಿದರು.

ನಂತರ ಮಾತನಾಡಿದ ದಾಕ್ಷಾಯಣಿ ಅವ್ವ ಅವರು, ‘ಶರಣಬಸವೇಶ್ವರರು ಹಾಗೂ ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ ಅವರ ಆಶೀರ್ವಾದ ಫಲವಾಗಿ ಗೌರವ ಡಾಕ್ಟರೇಟ್ ಪದವಿ ಲಭಿಸಿದೆ' ಎಂದರು.

ಡಾ.ಶರಣಬಸವಪ್ಪ ಅಪ್ಪ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.