ಕಲಬುರಗಿ: ಪ್ರಶಾಂತ ನಗರದ ಹನುಮಾನ ಮಂದಿರದಲ್ಲಿ ಸೋಮವಾರ ಉತ್ತರಾಧಿ ಮಠಾಧೀಶ ಸತ್ಯಾತ್ಮತೀರ್ಥರ 29ನೇ ಪೀಠಾರೋಹಣ ಮಹೋತ್ಸವದ ಅಂಗವಾಗಿ ರಾಮಸೇವಾ ಪರಿಷತ್ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ 80 ಪ್ರತಿಶತಕ್ಕಿಂತ ಹೆಚ್ಚು ಅಂಕ ಪಡೆದ ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಪರಿಷತ್ ಅಧ್ಯಕ್ಷ ಗುಂಡಾಚಾರ್ಯ ಜೋಶಿ ನರಿಬೋಳ ಮಾತನಾಡಿ, ‘ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಗೆ ಸಂಸ್ಕಾರವನ್ನು ಕೊಡುವುದು ಅವಶ್ಯವಿದೆ. ವಿದ್ಯಾರ್ಥಿ ಜೀವನದಲ್ಲಿ ಚೆನ್ನಾಗಿ ಅಭ್ಯಾಸ ಮಾಡಬೇಕು. ಸನಾತನ ಧರ್ಮದ ರಕ್ಷಣೆಗಾಗಿ ಸಂಸ್ಕಾರವು ಅವಶ್ಯವಾಗಿದೆ’ ಎಂದರು.
ರಾಮಾಚಾರ್ಯ ಘಂಟಿ, ಪ್ರಹ್ಲಾದ ಭುರ್ಲಿ, ಡಿ.ವಿ. ಕುಲಕರ್ಣಿ, ಶಾಮರಾವ ಕುಲಕರ್ಣಿ, ಗೋಪಾಲರಾವ್, ಗುರುರಾಜ್ ಭರತನೂರ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.