ADVERTISEMENT

ಕುಲಪತಿ ಡಾ. ನಿಷ್ಠಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 17 ಮೇ 2019, 13:25 IST
Last Updated 17 ಮೇ 2019, 13:25 IST
ಕಲಬುರ್ಗಿಯ ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ನಿಷ್ಠಿ ಅವರನ್ನು ಸಮ ಕುಲಪತಿ ಡಾ. ವಿ.ಡಿ.ಮೈತ್ರಿ ಸನ್ಮಾನಿಸಿದರು
ಕಲಬುರ್ಗಿಯ ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ನಿಷ್ಠಿ ಅವರನ್ನು ಸಮ ಕುಲಪತಿ ಡಾ. ವಿ.ಡಿ.ಮೈತ್ರಿ ಸನ್ಮಾನಿಸಿದರು   

ಕಲಬುರ್ಗಿ: ನಗರದ ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ನಿಷ್ಠಿ ಅವರನ್ನು ವಿಶ್ವವಿದ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಶುಕ್ರವಾರ ಸನ್ಮಾನಿಸಿದರು.

ವಿಶ್ವವಿದ್ಯಾಲಯವು ಈಚೆಗೆ ಎಐಸಿಟಿಇಯಿಂದ ತನ್ನ ಎಲ್ಲ ಕೋರ್ಸಗಳಿಗೆ ಮಾನ್ಯತೆ ಪಡೆದ ಪ್ರಯುಕ್ತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ನಿಷ್ಠಿ, ‘ಮಾನ್ಯತೆ ಪಡೆಯಲು ಶರಣಬಸವ ವಿಶ್ವವಿದ್ಯಾಲಯದ ಸಿಬ್ಬಂದಿ ಮತ್ತು ಅಧಿಕಾರಿಗಳು ನಿರಂತರವಾಗಿ ಶ್ರಮಿಸಿದ್ದಾರೆ. ಕುಲಾಧಿಪತಿ ಡಾ. ಶರಣಬಸವಪ್ಪ ಅಪ್ಪ ಅವರ ಸೂಕ್ತ ಮಾರ್ಗದರ್ಶನ ಮತ್ತು ಸಲಹೆಯಿಂದಾಗಿ ಕಡಿಮೆ ಅವಧಿಯಲ್ಲಿ ವಿಶ್ವವಿದ್ಯಾಲಯವು ಎಲ್ಲ ಕೋರ್ಸ್‌ಗಳಿಗೆ ಮಾನ್ಯತೆ ಪಡೆಯಲು ಸಾಧ್ಯವಾಗಿದೆ’ ಎಂದರು.

ADVERTISEMENT

ಕುಲಸಚಿವ ಡಾ. ಅನಿಲಕುಮಾರ ಬಿಡವೆ, ಸಮ ಕುಲಪತಿ ಡಾ. ವಿ.ಡಿ.ಮೈತ್ರಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಟಿ.ವಿ.ಶಿವಾನಂದನ್ ಮಾತನಾಡಿದರು. ಡೀನ್ ಡಾ. ಲಕ್ಷ್ಮೀ ಮಾಕಾ, ಬಸವರಾಜ ಮಠಪತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.