ADVERTISEMENT

ಕಲಬುರಗಿ: ಬಿಸಿಯೂಟದ ಸಾಂಬಾರು ಪಾತ್ರೆಯಲ್ಲಿ ಬಿದ್ದಿದ್ದ ವಿದ್ಯಾರ್ಥಿನಿ ಸಾವು

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2023, 4:19 IST
Last Updated 19 ನವೆಂಬರ್ 2023, 4:19 IST
<div class="paragraphs"><p>ಮಹಾಂತಮ್ಮ</p></div>

ಮಹಾಂತಮ್ಮ

   

ಕಲಬುರಗಿ: ಬಿಸಿಯೂಟದ ಸಾಂಬಾರು ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾಳೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಚಿಣಮಗೇರ ಗ್ರಾಮದ ಸರ್ಕಾರಿ ಶಾಲೆಯ 2ನೇ ತರಗತಿಯ ವಿದ್ಯಾರ್ಥಿನಿ ಮಹಾಂತಮ್ಮ (8) ಮೃತಳು.

ADVERTISEMENT

ನವೆಂಬರ್ 16ರಂದು ಬಿಸಿಯೂಟ ತಯಾರಿಸುವ ಸಾಂಬಾರು ಪಾತ್ರೆಯಲ್ಲಿ ವಿದ್ಯಾರ್ಥಿನಿ ಬಿದ್ದಿದ್ದಳು. ಗಂಭೀರವಾಗಿ ಗಾಯಗೊಂಡಿದ್ದ ಮಹಾಂತಮ್ಮಳನ್ನ ಕಲಬುರಗಿಯ ಜಿಮ್ಸ್‌ಗೆ ದಾಖಲಿಸಲಾಗಿತ್ತು. ನಿನ್ನೆಯಷ್ಟೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಭಾನುವಾರ ನಸುಕಿನ ಜಾವ 3.30ರ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಈ ಪ್ರಕರಣದಲ್ಲಿ ಈಗಾಗಲೇ ಮುಖ್ಯ ಶಿಕ್ಷಕ, ಸಹ ಶಿಕ್ಷಕ ಹಾಗೂ ಅಡುಗೆ ಮುಖಸ್ಥರನ್ನು ಅಮಾನತು ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.