ADVERTISEMENT

ಕಲಬುರಗಿ: ಡಿ.28ರಿಂದ 30ರವರೆಗೆ ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 6:11 IST
Last Updated 27 ಡಿಸೆಂಬರ್ 2025, 6:11 IST
ವಿಶ್ವಾರಾಧ್ಯ ಸತ್ಯಂಪೇಟೆ
ವಿಶ್ವಾರಾಧ್ಯ ಸತ್ಯಂಪೇಟೆ   

ಕಲಬುರಗಿ: ‘ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವತಿಯಿಂದ ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನವನ್ನು ಡಿ.28ರಿಂದ 30ರವರೆಗೆ ಯಾದಗಿರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ’ ಪರಿಷತ್ತಿನ ಜಿಲ್ಲಾಧ್ಯಕ್ಷ ರವೀಂದ್ರ ಶಾಬಾದಿ, ಪ್ರಧಾನ ಕಾರ್ಯದರ್ಶಿ ಶಿವರಂಜನ ಸತ್ಯಂಪೇಟೆ ತಿಳಿಸಿದರು.

‘ಸಾಹಿತಿ, ಚಿಂತಕ ವಿಶ್ವಾರಾಧ್ಯ ಸತ್ಯಂಪೇಟೆ ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ಜರುಗಲಿದ್ದು, 28ರಂದು ಮಧ್ಯಾಹ್ನ 2.30ಕ್ಕೆ ಮೈಲಾಪುರ ಅಗಸಿಯಿಂದ ಅಧ್ಯಕ್ಷರ ಮೆರವಣಿಗೆ ನಡೆಯಲಿದೆ. ಸಚಿವ ಶರಣಬಸಪ್ಪ ದರ್ಶನಾಪುರ ಮೆರವಣಿಗೆಗೆ ಚಾಲನೆ ನೀಡುವರು’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಡಿ.29ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಚಿವ ಸತೀಶ್ ಜಾರಕಿಹೊಳಿ, ವಿಜ್ಞಾನಿ ಎ.ಎಸ್. ಕಿರಣ್‌ಕುಮಾರ್ ಪಾಲ್ಗೊಳ್ಳುವರು. ಸಚಿವ ಎನ್.ಎಸ್.ಬೋಸರಾಜು ವಿಜ್ಞಾನ ವಸ್ತುಪ್ರದರ್ಶನ ಉದ್ಘಾಟಿಸುವರು. ಪರಿಷತ್ತಿನ ರಾಜ್ಯಾಧ್ಯಕ್ಷ ಹುಲಿಕಲ್‌ ನಟರಾಜ್ ಅಧ್ಯಕ್ಷತೆ ವಹಿಸುವರು. ಇದೇ ಸಂದರ್ಭ ಜೀವಮಾನ ಸಾಧನಾ, ವಿಶಿಷ್ಟ ಸೇವಾ ಪ್ರಶಸ್ತಿ ಪ್ರದಾನ ನಡೆಯಲಿದೆ. ಬಳಿಕ ಗೋಷ್ಠಿಗಳಿವೆ ’ ಎಂದರು.

ADVERTISEMENT

‘ಡಿ.30ರಂದು ಮಧ್ಯಾಹ್ನ 12.30ಕ್ಕೆ ನಡೆಯುವ ಗೋಷ್ಠಿಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಆಶಯ ನುಡಿ ಹೇಳುವರು. ಮಧ್ಯಾಹ್ನ 2.30ಕ್ಕೆ ರಾಜ್ಯಮಟ್ಟದ ಎಚ್‌.ಎನ್‌. ಪ್ರಶಸ್ತಿ ಪ್ರದಾನ ನಡೆಯಲಿದೆ. ಸಂಜೆ 4ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ಸಂಸ್ಥಾನದ ದಾಕ್ಷಾಯಣಿ ಎಸ್‌.ಅಪ್ಪ ಸೇರಿ ಹಲವರಿಗೆ ರಾಜ್ಯಮಟ್ಟದ ಚೈತನ್ಯಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಂಜೆ 6ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ’ ಎಂದು ವಿವರಿಸಿದರು.

ರಾಜ್ಯ ಸಮಿತಿ ಸದಸ್ಯ ಶರಣಬಸವ ಕಲ್ಲಾ, ನಾಗರಾಜ ಪಾಟೀಲ, ಅಶೋಕ ದೊಡ್ಡಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.