ADVERTISEMENT

ಅಧಿಕಾರಿಗೆ ಜೀವ ಬೆದರಿಕೆ: ಮೂವರು ಬಿಜೆಪಿ ಮುಖಂಡರ ವಿರುದ್ಧ ಎಫ್ಐಆರ್‌

​ಪ್ರಜಾವಾಣಿ ವಾರ್ತೆ
Published 29 ಮೇ 2020, 17:39 IST
Last Updated 29 ಮೇ 2020, 17:39 IST
   

ಕಲಬುರ್ಗಿ: ಶಾಸಕ ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧ ಲಂಚದ ಆರೋಪ ಮಾಡಿದ್ದಕ್ಕಾಗಿ ಬಿಸಿಎಂ ಇಲಾಖೆ ಜಿಲ್ಲಾ ಅಧಿಕಾರಿ ರಮೇಶ ಸಂಗಾ ಅವರಿಗೆ ಜೀವ ಬೆದರಿಕೆ ಹಾಕಿದ್ದಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಿಜೆಪಿ ಮುಖಂಡರಾದ ಪಾಲಿಕೆಯ ಮಾಜಿ ಸದಸ್ಯರಾದ ಪ್ರಭು ಹಾದಿಮನಿ, ವಿಶಾಲ ದರ್ಗಿ ಹಾಗೂ ಮುಖಂಡ ಚಂದ್ರಕಾಂತ ಸಂತಪುರ ವಿರುದ್ಧ ಶುಕ್ರವಾರ ರಾತ್ರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂವರೂ ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗಿನ ಜಾವದವರೆಗೆ 20ಕ್ಕೂ ಹೆಚ್ಚು ಬಾರಿ ಕರೆ ಮಾಡಿ ಸಂಗಾ ಅವರಿಗೆ ಜೀವ ಬೆದರಿಕೆ ಹಾಕಿದ್ದಲ್ಲದೇ ಸರ್ಕಾರಿ ಕೆಲಸಕ್ಕೆ ಅಡ್ಡಿ ಉಂಟು ಮಾಡಿದ್ದರು. ಅವರ ಫೋನ್‌ ಕರೆಯ ಧ್ವನಿ ಮುದ್ರಿಕೆ ಇರುವ ಸಿ.ಡಿ.ಯನ್ನು ಹಾಜರುಪಡಿಸಿದ ಸಂಗಾ ಅವರು ಪೊಲೀಸರಿಗೆ ದೂರು ನೀಡಿದ್ದರು.

ದೂರನ್ನು ಆಧರಿಸಿ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.