ADVERTISEMENT

ಕಲಬುರಗಿ | ಲಾರಿ–ಬೈಕ್ ಡಿಕ್ಕಿ: ಮೃತಪಟ್ಟ ಐವರ ಆಧಾರ್‌ನಲ್ಲಿ ಬೆಂಗಳೂರು ವಿಳಾಸ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2023, 11:48 IST
Last Updated 2 ನವೆಂಬರ್ 2023, 11:48 IST
<div class="paragraphs"><p>ಅಪಘಾತ</p></div>

ಅಪಘಾತ

   

(ಸಾಂದರ್ಭಿಕ ಚಿತ್ರ)

ಕಲಬುರಗಿ: ಅಫಜಲಪುರ ತಾಲ್ಲೂಕಿನ ಬಳ್ಳೂರಗಿ ಗ್ರಾಮದ ಸಮೀಪ ಗುರುವಾರ ಸಂಭವಿಸಿದ ಅಪಘಾತದಲ್ಲಿ ಮಗು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ಬಳ್ಳೂರಿಗಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದಾರೆ. ಮೃತರು ಒಂದೇ ಕುಟುಂಬದವರಾಗಿದ್ದು, ಅವರ ಆಧಾರ್ ಗುರುತಿನ ಚೀಟಿಯಲ್ಲಿ ಬೆಂಗಳೂರಿನ ವಿಳಾಸವಿದೆ.

ದಂಪತಿ, ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿ ಐವರು ಒಂದೇ ಬೈಕ್ ಮೇಲೆ ಮಹಾರಾಷ್ಟ್ರದ ದುಧನಿ ಕಡೆಯಿಂದ ಅಫಜಲಪುರದತ್ತ ಹೊರಟಿದ್ದರು. ದುಧನಿಯತ್ತ ತೆರಳುತ್ತಿದ್ದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡು ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳಕ್ಕೆ ಅಫಜಲಪುರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.