ADVERTISEMENT

ಅತಿವೃಷ್ಟಿ ಪೀಡಿತ ಪ್ರದೇಶ ಎಂದು ಘೋಷಿಸಿ: ನಿಂಗಣ್ಣ ಹುಳುಗೋಳ್ಕರ್ ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 4:13 IST
Last Updated 25 ಸೆಪ್ಟೆಂಬರ್ 2025, 4:13 IST
ಶಹಾಬಾದ್ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಪಕ್ಷ ಹಾಗೂ ರೈತ ಮೋರ್ಚಾದ ವತಿಯಿಂದ ಅತಿವೃಷ್ಟಿ ಪೀಡಿತ ಜಿಲ್ಲೆಯ ಎಂದು ಘೋಷಿಸಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು
ಶಹಾಬಾದ್ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಪಕ್ಷ ಹಾಗೂ ರೈತ ಮೋರ್ಚಾದ ವತಿಯಿಂದ ಅತಿವೃಷ್ಟಿ ಪೀಡಿತ ಜಿಲ್ಲೆಯ ಎಂದು ಘೋಷಿಸಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು   

ಶಹಾಬಾದ್: ‘ಅತಿಯಾದ ಮಳೆಯಿಂದಾಗಿ ರೈತರು ಬೆಳೆದ ಎಲ್ಲಾ ಬೆಳೆಗಳು ಸಂಪೂರ್ಣ ನಷ್ಟವಾಗಿದೆ. ಹೀಗಾಗಿ ಕಲಬುರಗಿ ಜಿಲ್ಲೆಯನ್ನು ಅತಿವೃಷ್ಟಿ ಪೀಡಿತ ಜಿಲ್ಲೆ ಎಂದು ಘೋಷಿಸಿ ಪರಿಹಾರ ನೀಡಬೇಕು’ ಎಂದು ಶಹಾಬಾದ್ ಮಂಡಲ ಅಧ್ಯಕ್ಷ ನಿಂಗಣ್ಣ ಹುಳುಗೋಳ್ಕರ್ ಆಗ್ರಹಿಸಿದರು.

ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಪಕ್ಷ ಹಾಗೂ ರೈತ ಮೋರ್ಚಾದ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಪ್ರತಿ ಎಕರೆಗೆ ಕನಿಷ್ಠ ₹50 ಸಾವಿರದಂತೆ ಪರಿಹಾರ ಘೋಷಿಸಬೇಕು’ ಎಂದು ಬಿಜೆಪಿ ಪಕ್ಷದ ಪ್ರಮುಖರಾದ ಅಣವೀರ ಇಂಗಿನಶೆಟ್ಟಿ, ಅರುಕುಮಾರ ಪಟ್ಟಣಕರ, ಹಾಗೂ ಚಂದ್ರಕಾಂತ ಗೊಬ್ಬುರಕರ್ ಮಾತನಾಡಿ ಸರ್ಕಾರಕ್ಕೆ ಮನವಿ ಮಾಡಿದರು.

ADVERTISEMENT

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲ್ಲೂಕ ದಂಡಾಧಿಕಾರಿ ನೀಲಪ್ರಭ ಬಬಲಾದ ಅವರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ಗ್ರೇಟ್ 2 ತಹಶೀಲ್ದಾರ ಗುರುರಾಜ ಸಂಗಾವಿ ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಕನಕಪ್ಪ ದಂಡುಗುಳ್ಕರ್, ಬಸವರಾಜ ಬಿರಾದರ, ದೇವದಾಸ ಜಾಧವ್, ಸಿದ್ರಾಮ ಕುಸಾಳೆ, ಸದಾನಂದ ಕುಂಬಾರ,ಶರಣಪ್ಪ ಬುಗಶೆಟ್ಟಿ, ನಾರಾಯಣ ಕಂದಕೂರ, ಶಿವಕುಮಾರ ಇಂಗಿನಶೆಟ್ಟಿ, ಸೂರ್ಯಕಾಂತ ವಾರದ, ಬಸವರಾಜ ಮದ್ರಿಕಿ, ಶಶಿಕಲಾ ಸಜ್ಜನ, ನೀಲಗಂಗಮ್ಮ ಗಂಟ್ಲಿ, ಪದ್ಮಾ ಕಟಗೆ ಹಾಗೂ ಬಿಜೆಪಿ ಪಕ್ಷದ ರೈತ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.