ADVERTISEMENT

ಅಫಜಲಪುರ | ಅತಿವೃಷ್ಟಿ ಹಾನಿ ಬಗ್ಗೆ ನಿಖರ ಮಾಹಿತಿ ನೀಡಿ: ತಹಶೀಲ್ದಾರ್ ನಾಗಮ್ಮ

ಅಧಿಕಾರಿಗಳಿಗೆ ತಹಶೀಲ್ದಾರ್ ನಾಗಮ್ಮ ಎಂ.ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 3:35 IST
Last Updated 1 ನವೆಂಬರ್ 2020, 3:35 IST
ಅಫಜಲಪುರ ತಹಶೀಲ್ದಾರ್‌ ಕಚೇರಿಯಲ್ಲಿ ಭೀಮಾ ಪ್ರವಾಹ ಸಮೀಕ್ಷೆ ಮಾಡುವ ಬಗ್ಗೆ ಶುಕ್ರವಾರ ಕರೆದ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ತಹಶೀಲ್ದಾರ್ ನಾಗಮ್ಮ ಎಂ.ಕೆ ಮಾತನಾಡಿದರು.
ಅಫಜಲಪುರ ತಹಶೀಲ್ದಾರ್‌ ಕಚೇರಿಯಲ್ಲಿ ಭೀಮಾ ಪ್ರವಾಹ ಸಮೀಕ್ಷೆ ಮಾಡುವ ಬಗ್ಗೆ ಶುಕ್ರವಾರ ಕರೆದ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ತಹಶೀಲ್ದಾರ್ ನಾಗಮ್ಮ ಎಂ.ಕೆ ಮಾತನಾಡಿದರು.   

ಅಫಜಲಪುರ: ಭೀಮಾ ಪ್ರವಾಹದಿಂದ ನದಿ ದಡದ ಗ್ರಾಮಗಳು ಮುಳುಗಡೆಯಾಗಿದ್ದು, ಅಪಾರ ಆಸ್ತಿ ಹಾನಿಯಾಗಿದೆ. ಈ ಕುರಿತು ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು ನಿಖರವಾದ ಮಾಹಿತಿ ನೀಡಬೇಕು ಎಂದು ತಹಶೀಲ್ದಾರ್ ನಾಗಮ್ಮ ಎಂ.ಕೆ ತಿಳಿಸಿದರು.

ಇಲ್ಲಿನ ತಹಶೀಲ್ದಾರ್‌ ಕಚೇರಿಯಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಿಗರ ಸಭೆಯಲ್ಲಿ ಅವರು ಮಾತನಾಡಿದರು.

ಹಾನಿ ಸಮೀಕ್ಷೆ ಮಾಡುವಾಗ ತಮಗೆ ವಹಿಸಿಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ತಪ್ಪು ಮಾಹಿತಿ ನೀಡಬಾರದು. ಕೆಲಸದಲ್ಲಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ADVERTISEMENT

ಪ್ರವಾಹದಿಂದ ಬೆಳೆ ಹಾನಿಯಾಗಿದೆ. ಕೆಲವು ಮನೆಗಳಿಗೆ ನೀರು ನುಗ್ಗಿ ಕುಸಿದಿವೆ. ಇನ್ನೂ ಕೆಲವು ಕಡೆ ಜಾನುವಾರುಗಳು ಸಾವನ್ನಪ್ಪಿವೆ. ಇವುಗಳ ಬಗ್ಗೆ ಮಾಹಿತಿ ಕಲೆ ಹಾಕಿ ಶೀಘ್ರ ವರದಿ ಸಲ್ಲಿಸಬೇಕು. ಮುಂದಿನ ಕ್ರಮ ಜಿಲ್ಲಾಧಿಕಾರಿಗಳು ತೆಗೆದುಕೊಳ್ಳುತ್ತಾರೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.