
ಪ್ರಜಾವಾಣಿ ವಾರ್ತೆ
ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮಾಜಿ ಸೈನಿಕನನ್ನುಸೋಮವಾರ ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಸರೂರ ಗ್ರಾಮದ ವಿಶ್ವನಾಥ ತಿಮ್ಮಪ್ಪ ಮಾನೆ ಬಂಧಿತ ಆರೋಪಿ.
ಕಲಬುರಗಿಯ ನೊಬೆಲ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿಬ್ಲೂಟೂತ್ ಉಪಕರಣ ಬಳಸಿದ್ದ ಬಗ್ಗೆ ಸಿಐಡಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಈಗಾಗಲೇ ಬಂಧನದಲ್ಲಿರುವ ಪ್ರಕರಣದ ಪ್ರಮುಖ ಕಿಂಗ್ ಪಿನ್ ಆರ್.ಡಿ. ಪಾಟೀಲ ಅಕ್ರಮವೆಸಗಲು ನೆರವಾಗಿದ್ದರು ಎಂದು ಮೂಲಗಳು ತಿಳಿಸಿವೆ.
ವಿಶ್ವನಾಥ ಮಾನೆ ಮಾಜಿ ಸೈನಿಕರ ಕೋಟಾದಲ್ಲಿ ಪ್ರಥಮ ಸ್ಥಾನದಲ್ಲಿ ಪಿಎಸ್ಐ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು.
ಹಾಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಬಂಧಿಸಿದ್ದ ಸಿಐಡಿ ಇದೇ ಮೊದಲ ಬಾರಿಗೆ ಮಾಜಿ ಸೈನಿಕನನ್ನು ಬಂಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.