ADVERTISEMENT

ಕಲ್ಲಂಗಡಿ ಹಣ್ಣು ಸರಬರಾಜು ಮಾಡಲಾಗದೇ ನೊಂದ ರೈತ ನೇಣಿಗೆ ಶರಣು

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2020, 9:53 IST
Last Updated 31 ಮಾರ್ಚ್ 2020, 9:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಲಬುರ್ಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಲಾಡ ಚಿಂಚೋಳಿ ಗ್ರಾಮದ ರೈತ ತಾವು ಬೆಳೆದಿದ್ದ ಕಲ್ಲಂಗಡಿ ಹಣ್ಣನ್ನು ಮಾರಾಟ ಮಾಡಲು ಸಾಧ್ಯವಾಗದ್ದಕ್ಕೆ ಹೊಲದಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.

ಚಂದ್ರಕಾಂತ ಬಿರಾದಾರ (45) ನೇಣಿಗೆ ಶರಣಾದ ರೈತ‌.

3 ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಹಣ್ಣು ಬೆಳೆದಿದ್ದರು. ಆದರೆ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ದೇಶದಾದ್ಯಂತ ಲಾಕ್ ಡೌನ್ ಘೋಷಿಸಿದ್ದರಿಂದ ಕಲ್ಲಂಗಡಿ ಸಾಗಾಟ ಮಾಡಲು ಆಗಿರಲಿಲ್ಲ ಎನ್ನಲಾಗಿದೆ. ಇದರಿಂದ ‌ಮನನೊಂದು ಸೋಮವಾರ ರಾತ್ರಿ ನೇಣಿಗೆ ಶರಣಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.