
ಕಲಬುರಗಿ: ‘ನಗರದ ಜನನಿ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಜನವರಿ 4ರಿಂದ ಪ್ರತಿ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3.30ರವರೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಉಚಿತ ಪರೀಕ್ಷಾ ತಯಾರಿ ತರಬೇತಿ ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಪ್ರೊ. ಎಚ್.ಎನ್.ಹೊನ್ನಾಳೆ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಗಣಿತ, ವಿಜ್ಞಾನ, ಇಂಗ್ಲಿಷ್ ವಿಷಯಗಳನ್ನು ಬೋಧನೆ ಮಾಡುವ ಜೊತೆಗೆ ಮಧ್ಯಾಹ್ನದ ಉಪಾಹಾರ ವ್ಯವಸ್ಥೆಯೂ ಮಾಡಲಾಗುವುದು’ ಎಂದರು.
ಹೆಚ್ಚಿನ ಮಾಹಿತಿಗೆ ಆಳಂದ್ ಚೆಕ್ ಪೋಸ್ಟ್ ಬಳಿ ಸಮೀಪವಿರುವ ಜನನಿ ಪದವಿಪೂರ್ವ ಕಾಲೇಜು ಹಾಗೂ ಮೊಬೈಲ್ 9449139379, 9008073921ಗೆ ಸಂಪರ್ಕಿಸಬಹುದು.
ಪತ್ರಿಕಾಗೋಷ್ಠಿಯಲ್ಲಿ ಪ್ರಾಚಾರ್ಯ ಎಸ್.ಕೆ. ಕುಂಬಾರ, ಮಹೇಶ ಕಣಜೆ, ಚಂದ್ರಕಾಂತ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.