
ಪ್ರಜಾವಾಣಿ ವಾರ್ತೆಶಾಂತಪ್ಪ ಪಸಾರ
ಕಮಲಾಪುರ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ದಸ್ತಾಪುರ ಗ್ರಾಮದ ನಿವಾಸಿ, ಸ್ವಾತಂತ್ರ್ಯ ಹೋರಾಟಗಾರ ಶಾಂತಪ್ಪ ಪಸಾರ (95) ಗುರುವಾರ ಬೆಳಿಗ್ಗೆ ನಿಧನರಾದರು.
ಮೃತರಿಗೆ ಇಬ್ಬರು ಪುತ್ರರು ಇದ್ದಾರೆ. ಗೋವಾ ವಿಮೋಚನಾ ಚಳವಳಿ ಹೋರಾಟಗಾರರು, ಜಿಲ್ಲಾ ಸಹಕಾರಿ ಯೂನಿಯನ್ ಸದಸ್ಯರು, ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.
ಸ್ವಗ್ರಾಮದಲ್ಲಿ ಶುಕ್ರವಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.