ಕಲಬುರಗಿ: ‘ರಾಜ್ಯ ಸರ್ಕಾರ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಲು ನಿರ್ಧರಿಸಿರುವುದು ಸಂತಸದ ವಿಷಯ. ಹಳೆ ಪಿಂಚಣಿ ಹಾಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
‘7ನೇ ವೇತನ ಆಯೋಗದ ಶಿಫಾರಸುಗಳನ್ನು ಹಿಂದೆಯೇ ಜಾರಿ ಮಾಡಬೇಕಾಗಿತ್ತು. ಚುನಾವಣೆ ನೆಪವೊಡ್ಡಿ ಇಲ್ಲಿಯವರೆಗೂ ಎಳೆದುಕೊಂಡು ಬರಲಾಗಿದೆ. ಸರ್ಕಾರ ನೌಕರರ ಇತರ ಬೇಡಿಕೆಗಳ ಈಡೇರಿಕೆಗೂ ಮುಂದಾಗಬೇಕು’ ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.