ADVERTISEMENT

ಗಾಂಧೀಜಿ ತತ್ವಗಳಿಂದ ದೇಶ ಪ್ರಗತಿ ಸಾಧ್ಯ: ಪ್ರೊ. ಶಶಿಕಾಂತ

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಗಾಂಧೀಜಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 6:36 IST
Last Updated 3 ಅಕ್ಟೋಬರ್ 2025, 6:36 IST
ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಅಂಗವಾಗಿ ಕುಲಪತಿ ಶಶಿಕಾಂತ ಉಡಿಕೇರಿ ಅವರು ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು. ರಮೇಶ ಲಂಡನಕರ್, ಜಯಾಂಬಿಕಾ, ಎನ್.ಜಿ.ಕಣ್ಣೂರ, ಹೂವಿನಬಾವಿ ಬಾಬಣ್ಣ, ಹಣಮಂತ ಜಂಗೆ, ಅಬ್ದುಲ್ ರಬ್ ಉಸ್ತಾದ್, ದೇವಿದಾಸ ಮಾಲೆ ಭಾಗವಹಿಸಿದ್ದರು
ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಅಂಗವಾಗಿ ಕುಲಪತಿ ಶಶಿಕಾಂತ ಉಡಿಕೇರಿ ಅವರು ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು. ರಮೇಶ ಲಂಡನಕರ್, ಜಯಾಂಬಿಕಾ, ಎನ್.ಜಿ.ಕಣ್ಣೂರ, ಹೂವಿನಬಾವಿ ಬಾಬಣ್ಣ, ಹಣಮಂತ ಜಂಗೆ, ಅಬ್ದುಲ್ ರಬ್ ಉಸ್ತಾದ್, ದೇವಿದಾಸ ಮಾಲೆ ಭಾಗವಹಿಸಿದ್ದರು   

ಕಲಬುರಗಿ: ‘ಸತ್ಯ ಮತ್ತು ಅಹಿಂಸೆಯ ಮೂಲಕ ಸ್ವಾತಂತ್ರ್ಯ ಪಡೆದುಕೊಳ್ಳಲು ಸಾಧ್ಯ ಎಂಬುದು ಗಾಂಧೀಜಿಯವರ ಅಹಿಂಸಾ ಚಳವಳಿಯಿಂದ ಇಡೀ ಪ್ರಪಂಚಕ್ಕೆ ತಿಳಿದಿದೆ. ಆದ್ದರಿಂದ ಗಾಂಧಿ ಅವರ ಜೀವನ ತತ್ವಗಳನ್ನು ಅನುಸರಿಸಿದರೆ ದೇಶದ ಅಗಾಧ ಪ್ರಗತಿ ಸಾಧ್ಯವಿದೆ’ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ ಎಸ್. ಉಡಿಕೇರಿ ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಕಾರ್ಯ ಸೌಧದಲ್ಲಿರುವ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧೀಜಿ ಮತ್ತು ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪ ಸಮರ್ಪಿಸಿ ಮಾತನಾಡಿದರು.

ಪತ್ರಕರ್ತ ಮನೋಜಕುಮಾರ್ ಗುದ್ದಿ ಮಾತನಾಡಿದರು.

ADVERTISEMENT

ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ. ರಮೇಶ ಲಂಡನಕರ್, ಮೌಲ್ಯಮಾಪನ ಕುಲಸಚಿವ ಪ್ರೊ. ಎನ್.ಜಿ ಕಣ್ಣೂರು, ವಿತ್ತಾಧಿಕಾರಿ ಜಯಾಂಬಿಕಾ, ಶಿಕ್ಷಣ ನಿಕಾಯದ ಡೀನ್ ಪ್ರೊ. ಹೂವಿನಬಾವಿ ಬಾಬಣ್ಣ, ಕಲಾ ನಿಕಾಯದ ಡೀನ್ ಪ್ರೊ. ಅಬ್ದುಲ್ ರಬ್ ಉಸ್ತಾದ್, ಕಾನೂನು ನಿಕಾಯದ ಡೀನ್ ಪ್ರೊ. ದೇವಿದಾಸ ಮಾಲೆ, ಸಿಂಡಿಕೇಟ್ ಸದಸ್ಯರು, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರು, ಸ್ನಾತಕೋತ್ತರ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಅತಿಥಿ ಸಹಾಯಕ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಗಾಂಧಿ ಜಯಂತಿ ಅಂಗವಾಗಿ ಆಡಳಿತ ಮತ್ತು ಪರೀಕ್ಷಾ ವಿಭಾಗಗಳ ಆವರಣದಲ್ಲಿ ಶ್ರಮದಾನ ಹಾಗೂ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಉತ್ತಮ ಸಾಧನೆ ಮಾಡಿದ ವಿಶ್ವವಿದ್ಯಾಲಯದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ದೈಹಿಕ ಶಿಕ್ಷಣ ವಿಭಾಗದ ಹಣಮಂತ ಜಂಗೆ ಸ್ವಾಗತಿಸಿದರು. ಸಂಗೀತ ವಿಭಾಗದ ಪ್ರಾಧ್ಯಾಪಕಿ ಪ್ರೊ.ಲಕ್ಷ್ಮಿ ಶಂಕರ ಜೋಶಿ, ಸಿದ್ಧಾರ್ಥ ಚಿಮ್ಮಾಇದಲಾಯಿ ಹಾಗೂ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಗೂ ಗಾಂಧಿ ಭಜನೆ ಹಾಡಿದರು. ವಿಶ್ವವಿದ್ಯಾಲಯ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸೂರ್ಯಕಾಂತ ಅಮರೆ ವಂದಿಸಿದರು. ಅಣವೀರಗೌಡ ಬಿರಾದಾರ ಕಾರ್ಯಕ್ರಮ ನಿರ್ವಹಿಸಿದರು.

ಈಜಿಪ್ತ್‌ನ ಕೈರೋಗೆ ಭೇಟಿ ನೀಡಿದ್ದಾಗ ಗಾಂಧೀಜಿ ಅವರ ಭಾವಚಿತ್ರವುಳ್ಳ ಉಡುಗೊರೆಯನ್ನು ಅಲ್ಲಿನ ಅತಿಥಿಗಳಿಗೆ ನೀಡಿದ್ದೆ. ಗಾಂಧೀಜಿ ಭಾವಚಿತ್ರ ಹಿಡಿದುಕೊಂಡು ಕುಳಿತುಕೊಳ್ಳಲು ಅವರು ಒಪ್ಪಲಿಲ್ಲ. ಅಷ್ಟು ಗೌರವ ಗಾಂಧೀಜಿಗೆ ಇದೆ
ಪ್ರೊ.ಶಶಿಕಾಂತ ಉಡಿಕೇರಿ ಕುಲಪತಿ ಗುಲಬರ್ಗಾ ವಿ.ವಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.