ಯಡ್ರಾಮಿ: ತಾಲ್ಲೂಕಿನ ಮಾಣಶಿವಣಗಿ ಗ್ರಾಮದಲ್ಲಿ ಅನಧಿಕೃತವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕಾಂತಪ್ಪ ಗುರುಬಸಪ್ಪ ಹಂಚನಾಳ ಬಂಧಿತ ಆರೋಪಿಯಾಗಿದ್ದು ಈತ ಮನೆಯ ಹಿಂಭಾಗದಲ್ಲಿ ಬೆಳೆಸಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ₹12ಲಕ್ಷ ಮೌಲ್ಯದ 12 ಕೆ.ಜಿ ಅಧಿಕ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ವೇಳೆ ಯಡ್ರಾಮಿ ಪೊಲೀಸ್ ಠಾಣೆ ಪಿಎಸ್‌ಐ ವಿಶ್ವನಾಥ ಮುದರೆಡ್ಡಿ, ದೊಡ ಬಸಪ್ಪ, ನಿರ್ಮಲಾ, ಉಮೇಶ ಕಡಕೋಳ, ಪಿಸಿ ಬಾದಷ್, ಬಸಲಿಂಗ, ಚಿದಾ ನಂದ, ಆರೋಗ್ಯ ಇಲಾಖೆ ರವೀಂದ್ರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.