ಅಫಜಲಪುರ: ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು ಮನೆ ಸಂಪೂರ್ಣ ಹೊತ್ತಿ ಉರಿದ ಘಟನೆ ತಾಲ್ಲೂಕಿನ ಶೇಷಗಿರಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಶೇಷಗಿರಿ ಗ್ರಾಮದ ಸಂತೋಷ ಭರಮಣ್ಣ ಹಿಳ್ಳಿ ಎಂಬುವವರಿಗೆ ಸೇರಿದ ಮನೆ ಸಂಪೂರ್ಣ ಸುಟ್ಟಿದ್ದು, ಅಪಾರ ಹಾನಿಯಾಗಿದೆ. ಅದೃಷ್ಟವಶಾತ್ ಸಿಲಿಂಡರ್ ಸ್ಪೋಟದ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಜೀವ ಹಾನಿ ಸಂಭವಿಸಿಲ್ಲ.
ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು, ಆಹಾರ ಧಾನ್ಯ, ಬಟ್ಟೆ, 4 ಗ್ರಾಂ ಚಿನ್ನ ಸೇರಿದಂತೆ ಅಗತ್ಯ ವಸ್ತುಗಳೆಲ್ಲವೂ ಸುಟ್ಟು ಕರಕಲಾಗಿವೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.