ADVERTISEMENT

ಕಲಬುರಗಿ: ಬಾಲಕನ ಸಾವಿಗೆ ಪರಿಹಾರ ನೀಡದ ಜೆಸ್ಕಾಂ: ಆರೋಪ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2025, 8:26 IST
Last Updated 8 ಅಕ್ಟೋಬರ್ 2025, 8:26 IST
   

ಕಲಬುರಗಿ: ನಗರದ ಕೇಂದ್ರ ಬಸ್ ನಿಲ್ದಾಣದ ಬಳಿಯ ಡಿವೈಡರ್‌ನ ವಿದ್ಯುತ್ ಶಾಕ್ ತಗುಲಿ ಸಾವಿಗೀಡಾದ ಬಸವನಗರದ ನಿವಾಸಿ, ಬಾಲಕ ಕಮಲರಾಜ್‌ (14) ಕುಟುಂಬಕ್ಕೆ ಇನ್ನೂವರೆಗೆ ಜೆಸ್ಕಾಂ ಪರಿಹಾರ ನೀಡಿಲ್ಲ. ಆದ್ದರಿಂದ ಈ ಪ್ರಕರಣವನ್ನು ಸಚಿವ ಸಂಪುಟದ ಮುಂದೆ ಇರಿಸಬೇಕು ಎಂದು ಬಾಲಕನ ತಾಯಿ ಉಷಾರಾಣಿ ಮೈತ್ರಿ ಶಾಸಕ ಅಲ್ಲಮಪ್ರಭು ಪಾಟೀಲ ಅವರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಶಾಸಕರಿಗೆ ಪತ್ರ ಬರೆದಿರುವ ಅವರು, ‘ಅಮೆರಿಕದಲ್ಲಿ ಎರಡು ಪ್ರಕರಣಗಳಲ್ಲಿ ಹೆಚ್ಚಿನ ಪರಿಹಾರವನ್ನು ನೀಡಲಾಗಿದೆ. ಅದೇ ಮಾದರಿಯಲ್ಲಿ ಎಕ್ಸಟ್ರಾ ಜ್ಯುಡಿಷಿಯಲ್‌ ಪ್ರಕರಣವೆಂದು ಪರಿಗಣಿಸಿ ಬಾಲಕನಿಗೆ ಅತ್ಯಧಿಕ ಪರಿಹಾರ ಮೊತ್ತವನ್ನು ಕೊಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸಿ ಸಚಿವ ಸಂಪುಟದಲ್ಲಿ ಈ ವಿಷಯವನ್ನು ಸೇರಿಸಬೇಕು’ ಎಂದು ತಿಳಿಸಿದ್ದಾರೆ.

‘ನನ್ನ ಮಗನ ಸಾವಿಗೆ ಸಂಬಂಧಿಸಿದಂತೆ ಜೆಸ್ಕಾಂ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಶಿಕ್ಷೆ ವಿಧಿಸಬೇಕು’ ಎಂದೂ ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.