ADVERTISEMENT

ಜೆಸ್ಕಾಂ: 21ರಂದು ಗ್ರಾಹಕರ ಸಭೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2019, 11:17 IST
Last Updated 18 ಡಿಸೆಂಬರ್ 2019, 11:17 IST

ಕಲಬುರ್ಗಿ: ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ (ಜೆಸ್ಕಾಂ) ವತಿಯಿಂದ ಇದೇ 21ರಂದುಕಲಬುರ್ಗಿಯ ಎಲ್ಲಾ ನಗರ ಉಪ ವಿಭಾಗಗಳ ವ್ಯಾಪ್ತಿಗೆ ಬರುವ ಎಚ್.ಟಿ. ಮತ್ತು ಎಲ್.ಟಿ. ಗ್ರಾಹಕರ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.

ಸೂಪರ್‌ ಮಾರ್ಕೆಟ್‌ನಲ್ಲಿರುವ ನಗರದ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಎಂಜಿನಿಯರರ ಕಚೇರಿಯಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ನಡೆಯಲಿದೆ. ವಿದ್ಯುತ್‌ ಪೂರೈಕೆಗೆ ಸಂಬಂಧಿಸಿದಂತೆ ಏನಾದರೂ ತೊಂದರೆಗಳಿದ್ದಲ್ಲಿಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಪರಿಹರಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT