ಕಲಬುರಗಿ: ಬಿಲ್ ನೀಡಿದ ನಂತರದ 30 ದಿನಗಳೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (ಕೆಇಆರ್‌ಸಿ) ನಿಯಮಾವಳಿ ಅನ್ವಯ ಅಂತಹ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ತಿಳಿಸಿದೆ.
ಸೆ.30ರೊಳಗೆ ಸರ್ಕಾರಿ, ಅರೆಸರ್ಕಾರಿ, ಇತರೆ ಎಲ್ಲಾ ಸಂಸ್ಥೆಗಳು, ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಇನ್ನಿತರ ಎಲ್ಲಾ ಗ್ರಾಹಕರು ನಿಗದಿತ ಅವಧಿಯಲ್ಲಿ ವಿದ್ಯುತ್ ಬಿಲ್ ಪಾವತಿಸಿ ಜೆಸ್ಕಾಂನೊಂದಿಗೆ ಸಹಕರಿಸುವಂತೆ ಕೋರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.