ADVERTISEMENT

ಕಲಬುರಗಿ | ಬಿಜೆಪಿ ಪರ ಪ್ರಚಾರ; ಜಿಮ್ಸ್ ಕ್ಲರ್ಕ್ ವಜಾ

​ಪ್ರಜಾವಾಣಿ ವಾರ್ತೆ
Published 25 ಮೇ 2023, 4:48 IST
Last Updated 25 ಮೇ 2023, 4:48 IST
ಜಿಮ್ಸ್ ಆಸ್ಪತ್ರೆ ಕಲಬುರಗಿ
ಜಿಮ್ಸ್ ಆಸ್ಪತ್ರೆ ಕಲಬುರಗಿ   

ಕಲಬುರಗಿ: ರಾಜ್ಯ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ವೇಳೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದ ಕಲಬುರಗಿ (ಗುಲ್ಬರ್ಗಾ) ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ(ಜಿಮ್ಸ್‌) ಗುತ್ತಿಗೆ ನೌಕರನಾಗಿದ್ದ ಸ್ಟೋರ್ ಕೀಪರ್ ಕಂ ಕ್ಲರ್ಕ್‌ ಒಬ್ಬರನ್ನು ಸೇವೆಯಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ವಿವೇಕ ಸಾಗರ ರಗಟೆ ವಜಾಗೊಂಡ ಕ್ಲರ್ಕ್. ಸರ್ಕಾರಿ ನೌಕರ ಆಗಿದ್ದು, ವಿಧಾನಸಭಾ ಚುನಾವಣೆ ವೇಳೆ ಒಂದು ರಾಜಕೀಯದ ಪಕ್ಷದ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿರುವ ಬಗ್ಗೆ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಶ್ರವಣಕುಮಾರ ಡಿ.ನಾಯಕ ಅವರು ದೂರು ನೀಡಿದ್ದರು.

ಶ್ರವಣಕುಮಾರ ಅವರ ದೂರು ಆಧರಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆ ಬಳಿಕ ಪರಿಶೀಲನಾ ವರದಿಯನ್ನು ಜಿಲ್ಲಾಧಿಕಾರಿಗೆ ಕಳುಹಿಸಲಾಗಿದ್ದು, ಸ್ಟೋರ್ ಕೀಪರ್‌ ವಿವೇಕ ಸಾಗರ ರಗಟೆ ಅವರನ್ನು ಕೆಲಸದಿಂದ ವಜಾ ಮಾಡಿದ್ದಾಗಿ ಆದೇಶದಲ್ಲಿ ತಿಳಿಸಿದ್ದಾರೆ ಎಂದು ಜಿಮ್ಸ್ ನಿರ್ದೇಶಕಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.