ಕಲಬುರ್ಗಿ: ಇಲ್ಲಿನ ಕಲಬುರ್ಗಿ ರೈಲು ನಿಲ್ದಾಣದಲ್ಲಿ ನಿಂತಿದ್ದ ಸರಕು ಸಾಗಣೆ ರೈಲಿನಲ್ಲಿ ಸಿಬ್ಬಂದಿ ಇದ್ದ ಬೋಗಿಗೆ ಗುರುವಾರ ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡಿದೆ.
ಕ್ಷಣಾರ್ಧದಲ್ಲಿ ಬೆಂಕಿ ಇಡೀ ಬೋಗಿಗೆ ವ್ಯಾಪಿಸಿತು. ತಕ್ಷಣ ರೈಲು ನಿಲ್ದಾಣಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.