ADVERTISEMENT

‘ಸರ್ಕಾರದ ಸಾಧನೆಗಳೇ ಅಭ್ಯರ್ಥಿಗೆ ಶ್ರೀರಕ್ಷೆ’

ಜೇವರ್ಗಿ: ಪ್ರಚಾರ ಸಭೆಯಲ್ಲಿ ಸಚಿವ ಮುರುಗೇಶ ನಿರಾಣಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2021, 10:08 IST
Last Updated 6 ಡಿಸೆಂಬರ್ 2021, 10:08 IST
ಜೇವರ್ಗಿಯಲ್ಲಿ ಶುಕ್ರವಾರ ನಡೆದ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಬಿಜೆಪಿ ನಾಯಕರು ಪ್ರಣಾಳಿಕೆ ಬಿಡುಗಡೆ ಮಾಡಿದರು. ಸಚಿವ ಮುರುಗೇಶ ನಿರಾಣಿ, ಸಂಸದ ಡಾ.ಉಮೇಶ ಜಾಧವ, ಅಭ್ಯರ್ಥಿ ಬಿ.ಜಿ.ಪಾಟೀಲ, ದೊಡ್ಡಪ್ಪಗೌಡ ಪಾಟೀಲ ನರಿಬೋಳ ಇದ್ದರು
ಜೇವರ್ಗಿಯಲ್ಲಿ ಶುಕ್ರವಾರ ನಡೆದ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಬಿಜೆಪಿ ನಾಯಕರು ಪ್ರಣಾಳಿಕೆ ಬಿಡುಗಡೆ ಮಾಡಿದರು. ಸಚಿವ ಮುರುಗೇಶ ನಿರಾಣಿ, ಸಂಸದ ಡಾ.ಉಮೇಶ ಜಾಧವ, ಅಭ್ಯರ್ಥಿ ಬಿ.ಜಿ.ಪಾಟೀಲ, ದೊಡ್ಡಪ್ಪಗೌಡ ಪಾಟೀಲ ನರಿಬೋಳ ಇದ್ದರು   

ಜೇವರ್ಗಿ: ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳೇ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿವೆ‘ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದರು.

ಶುಕ್ರವಾರ ಪಟ್ಟಣದ ಮಹಿಬೂಬ್ ಫಂಕ್ಷನ್ ಹಾಲ್‌ನಲ್ಲಿ ತಾಲ್ಲೂಕು ಬಿಜೆಪಿ ಮಂಡಲ ವತಿಯಿಂದ ವಿಧಾನಪರಿಷತ್ ಚುನಾವಣೆ ಅಂಗವಾಗಿ ಆಯೋಜಿಸಲಾಗಿದ್ದ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡುವುದರ ಜತೆಗೆ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ₹ 500 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭದಲ್ಲಿ ಕ-ಕ ಅಭಿವೃದ್ಧಿ ಮಂಡಳಿಗೆ ₹3 ಸಾವಿರ ಕೋಟಿ ಅನುದಾನ ನೀಡುವ ಭರವಸೆ ನೀಡಿದ್ದಾರೆ.. ರಾಜ್ಯ ಬಿಜೆಪಿ ಸರ್ಕಾರ ವಿಶೇಷ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಈ ಭಾಗದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಆ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ ಅವರನ್ನು ಗೆಲ್ಲಿಸುವ ಮೂಲಕ ಪಕ್ಷಕ್ಕೆ ಮತ್ತಷ್ಟು ಬಲ ತುಂಬಬೇಕು’ ಎಂದು ಮನವಿ
ಮಾಡಿದರು.

ADVERTISEMENT

ಸಂಸದ ಡಾ.ಉಮೇಶ ಜಾಧವ, ಬಿ.ಜಿ. ಪಾಟೀಲ ಮಾತನಾಡಿದರು.

ವಿಧಾನಪರಿಷತ್ ಸದಸ್ಯರಾದ ಸುನೀಲ ವಲ್ಯಾಪೂರೆ, ಶಶಿಲ್ ನಮೋಶಿ, ಅಮರನಾಥ ಪಾಟೀಲ, ಶರಣಪ್ಪ ತಳವಾರ, ಧರ್ಮಣ್ಣ ದೊಡ್ಡಮನಿ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ತಾಲ್ಲೂಕು ಅಧ್ಯಕ್ಷ ಭೀಮರಾವ ಗುಜಗೊಂಡ, ಮುಖಂಡರಾದ ರಮೇಶಬಾಬು ವಕೀಲ, ಮಲ್ಲಿನಾಥಗೌಡ ಯಲಗೋಡ, ಎಂ.ಬಿ.ಪಾಟೀಲ ಹರವಾಳ, ಶೋಬಾ ಬಾಣಿ, ಹಳ್ಳೆಪ್ಪಚಾರ್ಯ ಜೋಶಿ, ಅಶೋಕ ಸಾಹು ಗೋಗಿ, ಷಣ್ಮುಖಪ್ಪ ಸಾಹು ಗೋಗಿ, ಧರ್ಮಣ್ಣ ಇಟಗಾ, ಭಗವಂತ್ರಾಯ ಬೆಣ್ಣೂರ, ಸಂಗನಗೌಡ ಪಾಟೀಲ ರದ್ದೇವಾಡಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.