ADVERTISEMENT

ಕೆಕೆಆರ್‌ಡಿಬಿಗೆ 11 ಜನ ಸದಸ್ಯರ ನೇಮಕ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2022, 8:46 IST
Last Updated 16 ಫೆಬ್ರುವರಿ 2022, 8:46 IST
ಗೋಪಾಲಕೃಷ್ಣ
ಗೋಪಾಲಕೃಷ್ಣ   

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)ಗೆ ಕೊನೆಗೂ ರಾಜ್ಯ ಸರ್ಕಾರ 11 ಜನಪ್ರತಿನಿಧಿಗಳನ್ನೊಳನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.

ಕಳೆದ ಒಂದೂವರ ವರ್ಷದಿಂದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಸದಸ್ಯರ ಸಮಿತಿ ಇರಲಿಲ್ಲ. ಈ ಬಗ್ಗೆ ಕಲ್ಯಾಣ ಕರ್ನಾಟಕದ ಹೋರಾಟಗಾರರು, ಸಾರ್ವಜನಿಕರ ಒತ್ತಡಕ್ಕೆ ಮಣಿದ ಸರ್ಕಾರ ನಾಮನಿರ್ದೇಶನ ಮಾಡಿದೆ.

ಕೂಡ್ಲಿಗಿ ಶಾಸಕ ಎನ್‌.ವೈ. ಗೋಪಾಲಕೃಷ್ಣ, ಆಳಂದ ಶಾಸಕ ಸುಭಾಷ್ ಗುತ್ತೇದಾರ, ಶಹಾಪುರ ಶರಣಬಸಪ್ಪ ದರ್ಶನಾಪುರ, ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಕಾಶೆಂಪೂರ, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ವಿಧಾನಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ ಅವರನ್ನು ನಾಮನಿರ್ದೇಶನ ಮಾಡಲಾಗಿದ್ದು, ಈ ಸದಸ್ಯರ ಅವಧಿ ಒಂದು ವರ್ಷ ಅಥವಾ ಮುಂದಿನ ಆದೇಶದವರೆಗೆ ಎಂದು ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.