ADVERTISEMENT

ಪ್ರಜಾವಾಣಿಯವರು ನನಗೆ ನಿದ್ದೆ ಮಾಡಲು ಬಿಟ್ಟಿಲ್ಲ: ಸಚಿವ ಕಾರಜೋಳ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2019, 9:37 IST
Last Updated 18 ಅಕ್ಟೋಬರ್ 2019, 9:37 IST
ಕಲಬುರ್ಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ
ಕಲಬುರ್ಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ    

ಕಲಬುರ್ಗಿ: ಮೈಸೂರಿನಲ್ಲಿ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದೇವೆ ಎಂದು ದಂಪತಿ ಬೋಗಸ್ ದಾಖಲೆ ಹಚ್ಚಿದ್ದಾರೆ. ಈ ವಿಚಾರದ ಬೆನ್ನು ಹತ್ತಿರುವ ಪ್ರಜಾವಾಣಿ ಪತ್ರಿಕೆಯವರು ನನಗೆ ನಿದ್ದೆಮಾಡಲೂ ಬಿಟ್ಟಿಲ್ಲ ಎಂದು ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ‌ಎಂ.ಕಾರಜೋಳ ಚಟಾಕಿ ಹಾರಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅಂತರ್ಜಾತಿ ವಿವಾಹ ಪ್ರೋತ್ಸಾಹಿಸೋಣ. ಆದರೆ, ದುಡ್ಡಿಗಾಗಿ ಸುಳ್ಳು ದಾಖಲೆ ಸೃಷ್ಟಿಸುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಸಮಾಜ ಕಲ್ಯಾಣ ‌ಇಲಾಖೆ ಜಂಟಿ ನಿರ್ದೇಶಕ ಸತೀಶ್ ಕೆ.ಎಚ್. ಅವರಿಗೆ ಸೂಚನೆ ನೀಡಿದರು.

ಅಂತರ್ಜಾತಿ ವಿವಾಹ ಮಾಡಿಕೊಂಡವರಿಗೆ ಧನಸಹಾಯ ಬಿಡುಗಡೆ ‌ಮಾಡಲು ವಿಳಂಬ ಮಾಡಿದ ಬೀದರ್ ಜಿಲ್ಲೆ ಉಪನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡ ಸಚಿವರು, ವಾರದೊಳಗೆ ಫಲಾನುಭವಿಗಳಿಗೆ ಹಣ ಬಿಡುಗಡೆ ‌ಮಾಡದಿದ್ದರೆ ವಿಜಯಪುರ ಅಥವಾ ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆ ‌ಮಾಡುವುದಾಗಿ ಎಚ್ಚರಿಕೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.