ADVERTISEMENT

ಬಳೂರ್ಗಿ ಗ್ರಾ.ಪಂ: ಸತತ 6ನೇ ಬಾರಿಗೆ ಗೆಲುವು

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2020, 10:16 IST
Last Updated 31 ಡಿಸೆಂಬರ್ 2020, 10:16 IST
ಅರವಿಂದ ದೊಡ್ಡಮನಿ
ಅರವಿಂದ ದೊಡ್ಡಮನಿ   

ಅಫಜಲಪುರ: ತಾಲ್ಲೂಕಿನ ಬಳೂರ್ಗಿ ಗ್ರಾಮ ಪಂಚಾಯಿತಿ ವಾರ್ಡ್ ನಂ.4ರಲ್ಲಿ ಅರವಿಂದ ಶಿವರುದ್ರಪ್ಪ ದೊಡ್ಡಮನಿ 51 ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಸತತ 6ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಇದೇ ಗ್ರಾಮದ ವಾರ್ಡ್ ನಂ.3ರಿಂದ ಸ್ಪರ್ಧಿಸಿದ್ದ ಅವರ ಪತ್ನಿ ಗಂಗಾಬಾಯಿ 17 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಅರವಿಂದ ದೊಡ್ಡಮನಿ 1995ರಲ್ಲಿ ಮೊದಲ ಬಾರಿಗೆ ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿದ್ದರು. ಅವರ ಪತ್ನಿ ಮೊದಲ ಬಾರಿಗೆ ಸ್ಪರ್ಧಿಸಿದ್ದು, ಮೊದಲ ಯತ್ನದಲ್ಲೇ ಆಯ್ಕೆಯಾಗಿದ್ದಾರೆ.

ನಂತರ ಮಾತನಾಡಿದ ಅವರು, ‘ನನ್ನ ಗೆಲುವಿಗೆ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳೇ ಸಾಕ್ಷಿಯಾಗಿವೆ. ಈ ಬಾರಿ ನನ್ನ ಪತ್ನಿಯೂ ಆಯ್ಕೆಯಾಗಿದ್ದರಿಂದ ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡುತ್ತೇವೆ ಮತ್ತು ನಮ್ಮ ವಾರ್ಡ್‌ಗಳಿಗೆ ಮೂಲ ಸೌಲಭ್ಯವನ್ನು ಕಲ್ಪಿಸುವ ಕೆಲಸ ಮಾಡುತ್ತೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.