ADVERTISEMENT

ಕಲಬುರ್ಗಿ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಮತದಾನ ಆರಂಭ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2020, 4:24 IST
Last Updated 22 ಡಿಸೆಂಬರ್ 2020, 4:24 IST
ಕಲಬುರ್ಗಿ ಜಿಲ್ಲೆ‌ ಗೋಲಾ (ಕೆ) ಗ್ರಾಮದ ಮತಗಟ್ಟೆ ಬಳಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ
ಕಲಬುರ್ಗಿ ಜಿಲ್ಲೆ‌ ಗೋಲಾ (ಕೆ) ಗ್ರಾಮದ ಮತಗಟ್ಟೆ ಬಳಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ   

ಕಲಬುರ್ಗಿ: ಜಿಲ್ಲೆಯ ಕಲಬುರ್ಗಿ, ಆಳಂದ, ಅಫಜಲಪುರ, ಕಮಲಾಪುರ, ಕಾಳಗಿ ಹಾಗೂ ಶಹಾಬಾದ್ ತಾಲ್ಲೂಕಿನ 126 ಗ್ರಾಮ ಪಂಚಾಯಿತಿಗಳ 2,096 ಸ್ಥಾನಗಳಿಗೆ ಚುನಾವಣೆ ಆರಂಭಗೊಂಡಿದೆ.

997 ಮತಗಟ್ಟೆಗಳಲ್ಲಿ ಮತದಾನ ಆರಂಭಗೊಂಡಿದ್ದು, ಬೆಳಿಗ್ಗೆಯಿಂದಲೇ ಗ್ರಾಮಸ್ಥರು ಮತಗಟ್ಟೆಗಳಿಗೆ ಬಂದು ಮತ ಚಲಾವಣೆ ಮಾಡುತ್ತಿದ್ದಾರೆ. ಭದ್ರತೆಗಾಗಿ 1718 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿಮಿ ಮರಿಯಮ್ ಜಾರ್ಜ್ ಸೂಕ್ಣ್ಮ ಮತಗಟ್ಟೆಗಳ ಮೇಲೆ ವಿಶೇಷ ಗಮನ ಹರಿಸಿದ್ದಾರೆ.

141 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, 2096 ಸ್ಥಾನಗಳಿಗೆ 5876 ಜನ ಕಣದಲ್ಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.