ADVERTISEMENT

ಕಲಬುರ್ಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಸದಸ್ಯನ ಕೊಲೆ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 5:10 IST
Last Updated 3 ನವೆಂಬರ್ 2020, 5:10 IST
ಶಿವಲಿಂಗಪ್ಪ ಭೂಶೆಟ್ಟಿ
ಶಿವಲಿಂಗಪ್ಪ ಭೂಶೆಟ್ಟಿ   

ಕಲಬುರ್ಗಿ: ಇಲ್ಲಿನ ಕೈಲಾಸ ನಗರದಲ್ಲಿ ಸೋಮವಾರ ರಾತ್ರಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮ ಪಂಚಾಯಿತಿ ಸದಸ್ಯ ಶಿವಲಿಂಗಪ್ಪ ಭೂಶೆಟ್ಟಿ (53) ಕೊಲೆಯಾದವರು.

ಕೆಲ ತಿಂಗಳಿಂದ ಅವರು ಕಲಬುರ್ಗಿಯ ಕೈಲಾಸ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ರಾತ್ರಿ 11ರ ಸುಮಾರಿಗೆ ಮನೆ ಬಳಿ ನಿಂತಾಗ ಏಕಾಏಕಿ ದಾಳಿ ಮಾಡಿದ ಗುಂಪು ಕೊಲೆ ಮಾಡಿ ಪರಾರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.