ವಾಡಿ: ಸಮೀಪದ ಲಾಡ್ಲಾಪುರ ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಜಮಿಲೀಬಾಯಿ ಪೋಮು ರಾಠೋಡ 3ನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಲಾಡ್ಲಾಪುರ ಸಮೀಪದ ವಾಚು ನಾಯಕ ತಾಂಡಾದ ನಿವಾಸಿಯಾಗಿರುವ ಇವರು ವಾರ್ಡ್ ನಂ. 3ರ ಅನುಸೂಚಿತ ಜಾತಿಗೆ ಮೀಸಲಾಗಿದ್ದ ಸ್ಥಾನದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.
2010ರಲ್ಲಿ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಅವರು ಅದೇ ಅವಧಿಯಲ್ಲಿ ಲಾಡ್ಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು. ನಂತರ 2015ರಲ್ಲಿ ಜರುಗಿದ ಚುನಾವಣೆಯಲ್ಲಿ 2ನೇ ಬಾರಿಗೆ ಆಯ್ಕೆಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.