ADVERTISEMENT

ಅಂಕಲಗಾ ಪಿಡಿಒ ಅಮಾನತು

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2022, 13:52 IST
Last Updated 21 ಡಿಸೆಂಬರ್ 2022, 13:52 IST
   

ಕಲಬುರಗಿ: 15ನೇ ಹಣಕಾಸು ಯೋಜನೆಯಲ್ಲಿನ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಜೇವರ್ಗಿ ತಾಲ್ಲೂಕಿನ ಅಂಕಲಗಾ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸಿದ್ರಾಮ ಬಬಲೇಶ್ವರ ಅವರನ್ನು ಅಮಾನತು ಮಾಡಿ ಜಿ.ಪಂ. ಸಿಇಒ ಡಾ.ಗಿರೀಶ್ ಡಿ. ಬದೋಲೆ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿನ ಪಾರದರ್ಶಕತೆ (ಕೆಟಿಟಿಪಿ) ಕಾಯ್ದೆಯನ್ನು ಉಲ್ಲಂಘಿಸಿದ ಬಗ್ಗೆ ಬಬಲೇಶ್ವರ ವಿರುದ್ಧ ದೂರುಗಳು ಕೇಳಿ ಬಂದಿದ್ದವು. ವೋಚರ್ ಗಳ ಮೇಲೆ ಅಧ್ಯಕ್ಷರು, ಪಿಡಿಒ ಸಹಿ ಇಲ್ಲದಿದ್ದರೂ ಬಿಲ್ ಮಂಜೂರಾಗಿತ್ತು. ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ನಿರ್ಲಕ್ಷ್ಯ ವಹಿಸಿದ ಆರೋಪ ಕೇಳಿ ಬಂದಿತ್ತು.

ಈ ಬಗ್ಗೆ ಕಳೆದ ಆಗಸ್ಟ್ 20ರಂದು ಗ್ರಾ.ಪಂ. ಕಚೇರಿಗೆ ಭೇಟಿ ನೀಡಿದ್ದ ತಾ.ಪಂ. ಇಒ ಅಬ್ದುಲ್ ನಬಿ ಅವರು ತನಿಖೆ ನಡೆಸಿ ಸಿಇಒ ಅವರಿಗೆ ತನಿಖಾ ವರದಿಯನ್ನು ಸಲ್ಲಿಸಿದ್ದರು.

ADVERTISEMENT

ಈ ವರದಿ ಆಧರಿಸಿ ಅಮಾನತು ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.