ADVERTISEMENT

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಪದಕ ಗಳಿಸಿದ ಕಲಬುರಗಿ ಈಜುಪಟುಗಳು

​ಪ್ರಜಾವಾಣಿ ವಾರ್ತೆ
Published 21 ಮೇ 2025, 15:56 IST
Last Updated 21 ಮೇ 2025, 15:56 IST
ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಪದಕ ಜಯಿಸಿದ ಕಲಬುರಗಿಯ ಈಜುಪಟುಗಳಾದ ಲೋಕೇಶ್ ಪೂಜಾರ್, ರಾಜಶ್ರೀ ಎಂ.ಎಸ್. ಮತ್ತು ರೇಖಾ ಯಾನಿ
ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಪದಕ ಜಯಿಸಿದ ಕಲಬುರಗಿಯ ಈಜುಪಟುಗಳಾದ ಲೋಕೇಶ್ ಪೂಜಾರ್, ರಾಜಶ್ರೀ ಎಂ.ಎಸ್. ಮತ್ತು ರೇಖಾ ಯಾನಿ   

ಕಲಬುರಗಿ: ಶಿವಮೊಗ್ಗದಲ್ಲಿ ಮೇ 18ರಿಂದ ಮೂರು ದಿನ ನಡೆದ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಕಲಬುರಗಿಯ ಈಜುಪಟುಗಳು ಉತ್ತಮ ಪ್ರದರ್ಶನ ನೀಡಿ ಪದಕ ಜಯಿಸಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಈ ಕ್ರೀಡಾಕೂಟದಲ್ಲಿ ಕಲಬುರಗಿ ಸರ್ಕಾರಿ ನೌಕರರ ಸಂಘದ ವತಿಯಿಂದ 45 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಸ್ಪರ್ಧಿಸಿದ್ದ ವಿಭಾಗೀಯ ಆಹಾರ ಪ್ರಯೋಗಾಲಯದ ಹಿರಿಯ ಆಹಾರ ವಿಶ್ಲೇಷಣ ಅಧಿಕಾರಿ ಲೋಕೇಶ್ ಪೂಜಾರ್ 50 ಮೀ. ಬ್ರೆಸ್ಟ್‌ಸ್ಟ್ರೋಕ್‌ನಲ್ಲಿ ಚಿನ್ನ, 50 ಮೀ. ಬಟರ್‌ಫ್ಲೈನಲ್ಲಿ ಬೆಳ್ಳಿ ಹಾಗೂ 50 ಮೀ. ಫ್ರೀಸ್ಟೈಲ್‌ನಲ್ಲಿ ಬೆಳ್ಳಿಯ ಪದಕ ಗಳಿಸಿದ್ದಾರೆ.

ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯ ವಿಭಾಗೀಯ ಅಧಿಕಾರಿ ರಾಜಶ್ರೀ ಎಂ.ಎಸ್. ಅವರು 100 ಮೀ. ಬಟರ್‌ಫ್ಲೈ ಹಾಗೂ 100 ಮೀ ಬ್ಯಾಕ್‌ಸ್ಟ್ರೋಕ್‌ ವಿಭಾಗಗಳಿಂದ ಬೆಳ್ಳಿಯ ಪದಕ, 100 ಮೀ ಬ್ರೆಸ್ಟ್‌ಸ್ಟ್ರೋಕ್‌ನಲ್ಲಿ ಕಂಚಿನ ಪದಕ ಪಡೆದಿದ್ದಾರೆ.

ADVERTISEMENT

ಪಶು ಸಂಗೋಪನಾ ಇಲಾಖೆಯ ರೇಖಾ ಯಾನಿ ಅವರು 100 ಮೀ. ಬಟರ್‌ಫ್ಲೈನಲ್ಲಿ ಕಂಚಿನ ಪದಕ ಗಳಿಸಿದ್ದಾರೆ.

ಕ್ರೀಡಾಪಟುಗಳು ಸಾಧನೆಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂರಗಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಅಮೃತ್ ಅಷ್ಟಗಿ ಮತ್ತು ಈಜುಕೊಳ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.