ಕಲಬುರ್ಗಿ: ಇದೇ 19ರಂದು ನಡೆಯಬೇಕಿದ್ದ ಬಿ.ಇಡಿ. ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ಪರೀಕ್ಷೆಗಳನ್ನು ಗುಲಬರ್ಗಾ ವಿಶ್ವವಿದ್ಯಾಲಯವು ಮುಂದಕ್ಕೆ ಹಾಕಿದೆ.
ಪ್ರಸಕ್ತ ರಾಜ್ಯದಲ್ಲಿ ನಡೆಯುತ್ತಿರುವ ಸಾರಿಗೆ ಮುಷ್ಕರ ಹಾಗೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ನಡೆಯುವ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಮೌಲ್ಯಮಾಪನ ಕುಲಸಚಿವ ಪ್ರೊ.ಸೊನರ ನಂದಪ್ಪ ಡಿ. ತಿಳಿಸಿದ್ದಾರೆ.
ಸಂಬಂಧಿಸಿದ ಶಿಕ್ಷಣ ಮಹಾವಿದ್ಯಾಲಯಗಳ ಪ್ರಾಚಾರ್ಯರು ಈ ವಿಚಾರವನ್ನು ವಿದ್ಯಾರ್ಥಿಗಳ ಗಮನಕ್ಕೆ ತರಬೇಕು ಎಂದು ಸೂಚಿಸಿದ್ದಾರೆ.
ಅಲ್ಲದೇ, ಎಲ್ಲ ಸ್ನಾತಕ ಪದವಿ ಲಿಖಿತ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದೂ ಅವರು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.