ADVERTISEMENT

ಗುರುಮಠಕಲ್‌: ಗೂಡಂಗಡಿ ತೆರವು

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2019, 12:27 IST
Last Updated 7 ಡಿಸೆಂಬರ್ 2019, 12:27 IST
ಗುರುಮಠಕಲ್ ಪಟ್ಟಣದ ಬಸ್ ನಿಲ್ದಾಣದ ಎದುರಿನ ಮುಖ್ಯರಸ್ತೆಯಲ್ಲಿನ ಗೂಡಂಗಡಿಗಳನ್ನು ಪುರಸಭೆ ಸಿಬ್ಬಂದಿ ಶನಿವಾರ ತೆರವುಗೊಳಿಸಿದರು
ಗುರುಮಠಕಲ್ ಪಟ್ಟಣದ ಬಸ್ ನಿಲ್ದಾಣದ ಎದುರಿನ ಮುಖ್ಯರಸ್ತೆಯಲ್ಲಿನ ಗೂಡಂಗಡಿಗಳನ್ನು ಪುರಸಭೆ ಸಿಬ್ಬಂದಿ ಶನಿವಾರ ತೆರವುಗೊಳಿಸಿದರು   

ಗುರುಮಠಕಲ್: ಪಟ್ಟಣದಲ್ಲಿಯ ರಸ್ತೆ ಬದಿಯ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಪುರಸಭೆ ಸಿಬ್ಬಂದಿ ಶನಿವಾರ ಆರಂಭಿಸಿದರು.

ಗೂಡಂಗಡಿಗಳಿಂದಾಗಿ ಸಂಚಾರ ದಟ್ಟಣೆ ಉಂಟಾಗುತ್ತಿದೆ ಎಂದು ಸಾರ್ವಜನಿಕರು ದೂರಿದ ಕಾರಣ ಜಿಲ್ಲಾಡಳಿತ ಅಂಗಡಿಗಳ ತೆರವಿಗೆ ಆದೇಶಿಸಿದೆ.

‘ಈ ಕುರಿತು ಕಳೆದ 15 ದಿನಗಳಿಂದ ಧ್ವನಿವರ್ಧಕದ ಮೂಲಕ ಅಂಗಡಿಗಳನ್ನು ತೆರವುಗೊಳಿಸುವಂತೆ ಮನವಿ ಮಾಡಲಾಗಿತ್ತು. ಆದರೂ ಇದನ್ನು ವ್ಯಾಪಾರಿಗಳು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಗಡುವು ಮುಗಿದ ಕಾರಣ ತೆರವು ಕಾರ್ಯಾಚರಣೆಯನ್ನು ಆರಂಭಿಸಲಾಗಿ ದೆ’ ಎಂದು ಪುರಸಭೆ ಅಧಿಕಾರಿಗಳು ತಿಳಿಸಿದರು.

ADVERTISEMENT

ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಕೆಲ ಸ್ಥಳೀಯ ನಾಯಕರು ಅಧಿಕಾರಿಗಳೊಡನೆ ವಾಗ್ವಾದ ಮಾಡಿದರಾದರೂ ಇದಕ್ಕೆ ಸೊಪ್ಪು ಹಾಕದ ಅಧಿಕಾರಿಗಳು ದಿನವೀಡಿ ತೆರವು ಕಾರ್ಯಾಚರಣೆ ಮುಂದುವರೆಸಿದರು.

ಪುರಸಭೆ ವ್ಯವಸ್ಥಾಪಕ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ತಂಡ ಸ್ಥಳದಲ್ಲಿತ್ತು. ಗುರುಮಠಕಲ್ ಸಿಪಿಐ ಹೊಸಕೇರಪ್ಪಾ, ಪಿಎಸ್‌ಐ ಶಿಲಾದೇವಿ ಹಾಗೂ ಪೊಲೀಸ್‌ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.