ADVERTISEMENT

ವಾಲ್ಮೀಕಿ ನಿಗಮದ ಹಗರಣ ಸಿಬಿಐಗೆ ವಹಿಸಿ: ರಾಜ್ಯಪಾಲರಿಗೆ ಮನವಿ

ಬೆಂಗಳೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಗೆ ಮನವಿ ಸಲ್ಲಿಸಿದ ನಿಯೋಗ

​ಪ್ರಜಾವಾಣಿ ವಾರ್ತೆ
Published 30 ಜುಲೈ 2024, 14:24 IST
Last Updated 30 ಜುಲೈ 2024, 14:24 IST
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿ ಬೆಂಗಳೂರಿನಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿ ಬೆಂಗಳೂರಿನಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು   

ಕಲಬುರಗಿ: ‘ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಪಡೆಯಬೇಕು’ ಎಂದು ಒತ್ತಾಯಿಸಿ ಸ್ವಾಭಿಮಾನಿ ಎಸ್ಸಿ–ಎಸ್ಟಿ ಸಂಘಟನೆಗಳ ಒಕ್ಕೂಟದ ನಿಯೋಗ ಬೆಂಗಳೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಗೆ ಮನವಿ ಸಲ್ಲಿಸಿದೆ.

ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ ಅವರ ಆತ್ಮಹತ್ಯೆಯಿಂದಾಗಿ ₹187 ಕೋಟಿ ಹಗರಣ ಹೊರಬಿದ್ದಿದೆ. ಸಚಿವ ನಾಗೇಂದ್ರ ಜೈಲು ಸೇರಿದ್ದಾರೆ. ಆರ್ಥಿಕ ಇಲಾಖೆಯನ್ನು ತಮ್ಮ ಹತ್ತಿರ ಇಟ್ಟುಕೊಂಡ ಮುಖ್ಯಮಂತ್ರಿಯವರ ಗಮನಕ್ಕೆ ಬರದೆ ಇಂಥ ದೊಡ್ಡ ಹಗರಣ ಹೇಗೆ ನಡೆಯಿತು. ಆದ್ದರಿಂದ  ಸಮಗ್ರ ತನಿಖೆ ನಡೆಸಬೇಕಾಗಿದೆ. ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದು ನಿಯೋಗ ಮನವಿ ಮಾಡಿದೆ.

ಅಲ್ಲದೆ, ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹ ಧನ, ವಿದೇಶಿ ವಿದ್ಯಾರ್ಥಿ ವೇತನ ನಿಲ್ಲಿಸಲಾಗಿದೆ. ಮುಖ್ಯಮಂತ್ರಿ ಪರಿಶಿಷ್ಟ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ದೂರಿದ್ದಾರೆ.

ADVERTISEMENT

ಆರ್‌ಪಿಐ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಎ.ಬಿ.ಹೊಸಮನಿ, ಪಕ್ಷದ ರಾಜ್ಯಾಧ್ಯಕ್ಷ ಸತೀಶ್ ಹಾಸನ, ಸಂಚಾಲಕ ಅಂಬರೀಶ ಡಿ.ಎಂ., ಎಸ್‌ಎಸ್‌ಡಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರೂಪಕಲಾ ಹಾಗೂ ಡಿಎಸ್‌ಎಸ್‌ನ ಕೃಷ್ಣ ನಿಯೋಗದಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.