ADVERTISEMENT

ಕೂಲಿಕಾರರಿಗೆ ಆರೋಗ್ಯ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2025, 15:26 IST
Last Updated 23 ಏಪ್ರಿಲ್ 2025, 15:26 IST
ಕಲಬುರಗಿ ತಾಲ್ಲೂಕಿನ ಅವರಾದ (ಬಿ) ಕೆರೆಯ ಹೂಳೆತ್ತುವ ಸ್ಥಳದಲ್ಲಿ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಿತು
ಕಲಬುರಗಿ ತಾಲ್ಲೂಕಿನ ಅವರಾದ (ಬಿ) ಕೆರೆಯ ಹೂಳೆತ್ತುವ ಸ್ಥಳದಲ್ಲಿ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಿತು   

ಕಲಬುರಗಿ: ತಾಲ್ಲೂಕಿನ ಅವರಾದ (ಬಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅವರಾದ ಬಿ ಕೆರೆಯಲ್ಲಿ ಕೆರೆ ಹೂಳೆತ್ತುವ ಸ್ಥಳದಲ್ಲಿ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಕಾಮಗಾರಿ ಸ್ಥಳದಲ್ಲಿ ಸುಮಾರು 122 ಜನ ನರೇಗಾ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಂಡೆಪ್ಪ ದನಿ ಮಾತನಾಡಿ,‘ಕೂಲಿಕಾರರು ತಮ್ಮ ದೇಹದ ಆರೋಗ್ಯ ಸಂರಕ್ಷಣೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಮನವಿ ಮಾಡಿದರು. ಶಿಬಿರದಲ್ಲಿ ರಕ್ತದ ಒತ್ತಡ, ಶುಗರ್, ರಕ್ತ ಪರೀಕ್ಷೆ, ಕಣ್ಣಿನ ಪರೀಕ್ಷೆ ಹಲ್ಲು ಪರೀಕ್ಷೆಯನ್ನು ಮಾಡಲಾಯಿತು.

ADVERTISEMENT

ಈ ವೇಳೆ ಸ್ಥಳದಲ್ಲಿ ಅವರಾದ್‌ (ಬಿ) ಸಮುದಾಯ ಆರೋಗ್ಯ ಕೇಂದ್ರದ ಡಾ.ಶಿಲ್ಪಾ ಸಿ, ಐಇಸಿ ಸಂಯೋಜಕ ಮೋಸಿನ ಖಾನ್, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಲೀಮ್ ಹಾಗೂ ದೇವರಾಜ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.