ಕಲಬುರಗಿ: ಕಲಬುರಗಿ ನಗರ ಸೇರಿದಂತೆ ಕಾಳಗಿ, ಯಡ್ರಾಮಿ, ಜೇವರ್ಗಿ ತಾಲ್ಲೂಕಿನ ಹಲವೆಡೆ ಮಧ್ಯಾಹ್ನದ ಬಳಿಕ ಬಿರುಸಿನ ಮಳೆ ಸುರಿಯುತ್ತಿದೆ.
ಕಲಬುರಗಿಯಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಮಳೆಯಿಂದಾಗಿ ನಗರ ತಂಪಾಗಿದೆ. ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಮಹಾನಗರ ಪಾಲಿಕೆ ಚರಂಡಿಗಳ ಹಲವೆಡೆ ಹೂಳನ್ನು ತೆಗೆದು ನೀರು ಹರಿಯಲು ಅನುವು ಮಾಡಿಕೊಟ್ಟಿದೆ.
ಜಿಲ್ಲೆಯ ಚಿತ್ತಾಪುರ, ಸೇಡಂ, ಆಳಂದ, ಕಮಲಾಪುರ ತಾಲ್ಲೂಕಿನಲ್ಲಿ ಮೋಡ ಕವಿದ ವಾತಾವರಣವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.