ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ದಂಡೋತಿ ಗ್ರಾಮದಲ್ಲಿ ಜನರು ನಡೆದಾಡುವ ರಸ್ತೆಯ ಮೇಲೆ ಮಳೆಯ ನೀರು ಹರಿಯುತ್ತಿದೆ.
ಚಿತ್ತಾಪುರ(ಕಲಬುರಗಿ): ಗುರುವಾರ ರಾತ್ರಿಯಿಂದ ಶುಕ್ರವಾರ ಮಧ್ಯಾಹ್ನದವರೆಗೆ ನಿರಂತರ ಸುರಿದ ಮಳೆಗೆ ತಾಲ್ಲೂಕಿನಾದ್ಯಂತ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಜನರು ಮನೆಯ ಹೊರಗೆ ಬಾರದಂತೆ ಸುರಿದ ಮಳೆಯಿಂದ ಬೆಳಗ್ಗೆ ಜೀವನಾವಶ್ಯಕ ಸಾಮಗ್ರಿ ಖರೀದಿಸಲು, ದೈನಂದಿನ ಜೀವನಕ್ಕೆ ತೀವ್ರ ಅಡಚಣೆ ಉಂಟಾಯಿತು. ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಲು ಮಳೆಯಲ್ಲಿ ತೀವ್ರ ತೊಂದರೆ ಅನುಭವಿಸಿದರು.
ಮಳೆಯಿಂದ ಹೊಲಗದ್ದೆಗಳು ನೀರುಮಯವಾಗಿವೆ. ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ತಬ್ಧಗೊಂಡಿವೆ. ಮಳೆಯು ಕೂಷಿಕೂಲಿಕಾರ್ಮಿಕರು ಕೆಲಸವಿಲ್ಲದೆ ಮನೆಯಲ್ಲಿಯೆ ಇರುವಂತೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.