ADVERTISEMENT

ನದಿ ದಂಡೆಗೆ ತೆರಳದಂತೆ ಡಿ.ಸಿ. ಮನವಿ

ಆಗಸ್ಟ್ 8ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2022, 8:44 IST
Last Updated 5 ಆಗಸ್ಟ್ 2022, 8:44 IST
ಯಶವಂತ‌ ಗುರುಕರ್
ಯಶವಂತ‌ ಗುರುಕರ್   

ಕಲಬುರಗಿ: ಜಿಲ್ಲೆಯಲ್ಲಿ ಇದೇ ಆಗಸ್ಟ್ 4ರಿಂದ 8ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ನದಿ ದಂಡೆಗೆ ಸಾರ್ವಜನಿಕರು ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಕಲಬುರಗಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಮನವಿ ಮಾಡಿದ್ದಾರೆ.

ಭಾರಿ ಮಳೆಯಿಂದ ಭೀಮಾ ನದಿ ತೀರ, ಸನ್ನತಿ ಬ್ರಿಡ್ಜ್ ಕಂ ಬ್ಯಾರೇಜ್, ಬೆಣ್ಣೆತೊರಾ ಜಲಾಶಯ ಹಾಗೂ ಕೆಳದಂಡೆ ಮುಲ್ಲಾಮಾರಿ ಜಲಾಶಯಗಳಿಂದ ನದಿಗೆ ನೀರು ಬಿಡುವ ಸಾಧ್ಯತೆಯಿರುವ ಕಾರಣ ಅಕ್ಕಪಕ್ಕದ ಗ್ರಾಮಗಳ ಸಾರ್ವಜನಿಕರು ನದಿ ದಂಡೆಗೆ ತೆರಳದಂತೆ ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಜಾನುವಾರುಗಳನ್ನು ಸಹ ನದಿಯ ದಂಡೆಗೆ ಬಿಡಬಾರದು ಎಂದಿದ್ದಾರೆ.

ಪ್ರವಾಹದಿಂದ ನದಿ ದಂಡೆಯ ಗ್ರಾಮಸ್ಥರಿಗೆ ಏನಾದರೂ ಸಮಸ್ಯೆ ಕಂಡು ಬಂದಲ್ಲಿ ತುರ್ತಾಗಿ ಸಹಾಯವಾಣಿ ಸಂಖ್ಯೆ 1077, ದೂರವಾಣಿ ಸಂಖ್ಯೆ 08472–278677ಗೆ ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.